ದಿನದ ಅಪರಾಧಗಳ ಪಕ್ಷಿನೋಟ ೩೧ ನೇ ಮಾರ್ಚ್ ೦೮

March 31, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ -೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

  •   ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಲಕ್ಷ್ಮಿಸಾಗರ ಗ್ರಾಮದ ೧೬ ವರ್ಷದ ಯುವತಿಯು ಕಸ ಹಾಕುವ ಸಲುವಾಗಿ ತಮ್ಮ ಗ್ರಾಮದ ಹೊಲದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ಬಂದ ಅದೇ ಗ್ರಾಮದ ವಾಸಿ ಶ್ರೀನಿವಾಸ ಎಂಬುವನು ಯುವತಿಯನ್ನು ಬಲವಂತವಾಗಿ ಪಕ್ಕದಲ್ಲಿಯೇ ಇದ್ದ ನೀಲಗಿರಿ ತೋಪಿನೊಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುತ್ತಾನೆ. ಆರೋಪಿ ಶ್ರೀನಿವಾಸನನ್ನು ಬಂಧಿಸಲಾಗಿದ್ದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿರುತ್ತದೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 


ಶ್ರೀನಿವಾಸಪುರ ಪೊಲೀಸರಿಂದ ಕೊಲೆ ಪ್ರಕರಣ ಪತ್ತೆ: ಇಬ್ಬರು ಆರೋಪಿಗಳ ಬಂಧನ

March 31, 2008

ನಾಲ್ಕು ವರ್ಷ ವಯಸ್ಸಿನ ಬಾಲಕಿಯ ಅಪಹರಣ, ಮಾನಭಂಗ ಮತ್ತು ಕೊಲೆ ಪ್ರಕರಣವನ್ನು ಪತ್ತೆಹಚ್ಚಿ ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಶ್ರೀನಿವಾಸಪುರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಶ್ರೀನಿವಾಸಪುರ ಆರಕ್ಷಕ ವೃತ್ತನಿರೀಕ್ಷಕರಾದ ಶ್ರೀ ನಾರಾಯಣಸ್ವಾಮಿ ರವರ ನೇತೃತ್ವದಲ್ಲಿ ಆರೋಪಿ ಶ್ರೀನಿವಾಸಪುರ ಟೌನ್ ಸಂತೇಮೈದಾನದ ವಾಸಿ ಶಿವ @ ಬಿಕ್ಕಲೋಡು (೧೯) ಎಂಬುವನನ್ನು ದಿನಾಂಕ ೨೯-೦೩-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಕೋಡಿಪಲ್ಲಿ ಗ್ರಾಮದಲ್ಲಿ ಬಂಧಿಸಿದ್ದು ವಿಚಾರಣೆ ಮಾಡಿದಾಗ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಮತ್ತೊಬ್ಬ ಆರೋಪಿ ಶ್ರೀನಿವಾಸಪುರ ತಾಲೂಕು ಕೋಡಿಪಲ್ಲಿ ಗ್ರಾಮದ ವಾಸಿ ನರೇಶ (೨೧) ತಂದೆ ಸುಬ್ಬಣ್ಣ ಎಂಬುವನನ್ನು ದಿನಾಂಕ ೩೦-೦೩-೨೦೦೮ ರಂದು ೧೦೦೦ ಗಂಟೆಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶ್ರೀ ಸೂರ್ಯಪ್ರಕಾಶ್ ರವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿರುತ್ತದೆ. ಆರೋಪಿಗಳು ಮೃತ ಬಾಲಕಿಯ ಮೈಮೇಲಿದ್ದ ಒಡವೆಗಳನ್ನು ಕದಿಯುವ ಉದ್ದೇಶದಿಂದ ಅಪಹರಣ ಮಾಡಿ ಹಳೇ ಕಟ್ಟಡವೊಂದಕ್ಕೆ ಕರೆದೊಯ್ದು ಮಾನಭಂಗ ಮಾಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಮಾರ್ಚ್ ೦೮

March 31, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೨

  •   ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಖಾಜಿಕಲ್ಲಹಳ್ಳಿ ಗ್ರಾಮದ ವಾಸಿಗಳಾದ ಅಕ್ಕಲಪ್ಪ ಮತ್ತು ಆಂಜನಪ್ಪ ಎಂಬುವರು ರಾಷ್ಟ್ರೀಯ ಹೆದ್ದಾರಿ ೪ ರ ತಮ್ಮ ಗ್ರಾಮದ ಗೇಟ್ ಬಳಿ ತಮ್ಮ ಹೀರೋಹೋಂಡಾ ಸ್ಪ್ಲೆಂಡರ್‍ ಸಂಖ್ಯೆ ಕೆಎ-೦೩-ಇಕೆ-೩೩೭೨ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಎಪಿ-೧೧-ಜೆಡ್-೪೦೯೮ ರ ಬಸ್ ಚಾಲಕ ತನ್ನವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ದ್ವಿಚಕ್ರವಾಹನದ ಸವಾರರಿಗೆ ತೀವ್ರ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಆ ಪೈಕಿ ಅಕ್ಕಲಪ್ಪ ರವರು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

  •   ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೧೨೫೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಟಮಕ ಗ್ರಾಮದ ವಾಸಿಯಾದ ವೇದಾಂತಕುಮಾರ್‍ (೧೧) ಎಂಬುವರು ಟಮಕ ಬಳಿ ಇರುವ ವಿನಾಯಕ ವರ್ಕ್‌ಶಾಪ್ ಬಳೀ ನಿಂತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಲಾರಿ ಸಂಖ್ಯೆ ಕೆಎ-೦೨-ಎಎ-೧೧೮೮ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ವೇದಾಂತಕುಮಾರ್‍ ರವರ ತಲೆಗೆ ತೀವ್ರವಾದ ಗಾಯಗಳುಂಟಾಗಿ ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ಟೌನ್ ವಾಸಿ ಹಸೀನಾತಾಜ್ (೩೫) ಎಂಬುವರು ಕಾಣೆಯಾದ ಹೆಂಗಸು. ದಿನಾಂಕ ೩೦-೦೩-೨೦೦೮ ಕ್ಕೆ ಸುಮಾರು ೧೫ ದಿನಗಳ ಹಿಂದೆ ಮನೆಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟ ಹಸೀನಾತಾಜ್ ಹಿಂತಿರುಗಿಬಾರದೇ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಮಾರ್ಚ್ ೦೮

March 29, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ -೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಆಸ್ತಿಹಂಚಿಕೆಯ ವಿಚಾರದ ಹಿನ್ನೆಲೆಯಲ್ಲಿ ಮಾಲೂರು ತಾಲೂಕು ಜಂಗಲಹಳ್ಳಿ ಗ್ರಾಮದ ವಾಸಿ ಅಮರೇಶ ಎಂಬುವನು ತನ್ನ ತಂದೆಯ ಮೇಲೆ ಜಗಳ ತೆಗೆದು ಹಲ್ಲೆ ನಡೆಸಿರುವ ಘಟನೆ ಜಂಗಲಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೮-೦೩-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ಕೃತ್ಯ ಸಂಭವಿಸಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೫

-ಸ್ಥಳ ದಂಡ ಮೊತ್ತ: ರೂ. ೧೬೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಮಾರ್ಚ್ ೦೮

March 28, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ -೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಮಾನಭಂಗಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ನಾರಾಯಣಪುರ ಗ್ರಾಮದ ವಾಸಿ ಶಂಕರ್ಎಂಬುವರ ೪ ವರ್ಷದ ಮಗಳಾದ ವರ್ಷಿತಾ ಎಂಬ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಯಾರೋ ಅಪರಿಚಿತ ವ್ಯಕ್ತಿ ಅಪಹರಿಸಿ ಮಾನಭಂಗ ಮಾಡಿ ಕೊಲೆಗೈದಿರುವ ಘಟನೆ ಶ್ರೀನಿವಾಸಪುರ ಟೌನ್ ಸಂತೇ ಮೈದಾನದಲ್ಲಿ ನಡೆದಿರುತ್ತದೆ. ಕೊಲೆಗೀಡಾದ ಹುಡುಗಿ ವರ್ಷಿತಾ ಶ್ರೀನಿವಾಸಪುರ ಟೌನ್ ನಲ್ಲಿರುವ ತನ್ನ ತಾತ ಹಾಗೂ ಅಜ್ಜಿಯ ಮನೆಗೆ ಬಂದಿದ್ದು ದಿನಾಂಕ ೨೭-೦೩-೨೦೦೮ ರಂದು ರಾತ್ರಿ ಮನೆಯ ಮುಂಬಾಗದಲ್ಲಿ ತನ್ನ ತಾತ ಮತ್ತು ಅಜ್ಜಿಯೊಡನೆ ಮಲಗಿದ್ದಳು. ಆ ಸಮಯದಲ್ಲಿ ಬಂದ ಆರೋಪಿ ಮಗುವನ್ನು ಅಪಹರಣ ಮಾಡಿಕೊಂಡು ಹೋಗಿ ಈ ದುಷ್ಕೃತ್ಯ ಎಸಗಿರುತ್ತಾನೆ. ಮಗುವಿನ ತಾತ ನರಸಿಂಹಪ್ಪರವರು ಕಾಣೆಯಾದ ಮಗುವನ್ನು ಹುಡುಕಾಡಿಕೊಂಡು ಹೋಗುತ್ತಿದ್ದಾಗ ಮುಳಬಾಗಿಲು ರಸ್ತೆಯ ಹಳೇ ಕಟ್ಟಡವೊಂದರಲ್ಲಿ ಮಗುವಿನ ಮೃತದೇಹ ದೊರೆತಿರುತ್ತದೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಅರಹಳ್ಳೀ ಗ್ರಾಮದ ವಾಸಿ ಮುನಿಸ್ವಾಮಿ ಎಂಬುವನು ಕಳವು ಮಾಲಿನೊಂದಿಗೆ ಸಿಕ್ಕಿ ಬಿದ್ದಿರುತ್ತಾನೆ. ದಿನಾಂಕ ೨೭-೦೩-೨೦೦೮ ರಂದು ಮಾಲೂರು ಪೊಲೀಸ್ ಠಾಣೆಯ ಪೇದೆ ೭೭೬ ಹಾಗೂ ೧೪೨ ರವರು ಗಸ್ತುಕರ್ತವ್ಯದ ನಿಮಿತ್ತ ೧೬೩೦ ಗಂಟೆ ಸಮಯದಲ್ಲಿ ಯಶವಂತಪುರ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಇವರನ್ನು ಕಂಡ ಮೇಲ್ಕಂಡ ಆರೋಪಿ ತನ್ನ ಬಳಿ ಇದ್ದ ಒಂದು ಪ್ಲಾಸ್ಟಿಕ್ ಚೀಲದೊಡನೆ ಓಡಿಹೋಗಲು ಪ್ರಯತ್ನಿಸಿದಾಗ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಆರೋಪಿ ತನ್ನ ಬಳಿ ಇದ್ದ ಪ್ಲಾಸ್ಟಿಕ್ ಚೀಲದಲ್ಲಿದ್ದ ಕೇಬಲ್ ವೈರ್ಕಳವು ಮಾಲೆಂದು ಒಪ್ಪಿಕೊಂಡಿದ್ದು ಈ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ನ್ಯಾಯಾಂಗಬಂಧನಕ್ಕೆ ಒಳಪಡಿಸಲಾಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೪

  •   ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೩-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ವಾಸಿ ಶ್ರೀಧರ ಎಂಬುವರು ನಾಗರಾಜ ಎಂಬುವರೊಡನೆ ದ್ವಿಚಕ್ರವಾಹನ ಸಂಖ್ಯೆ ಕೆಎ-೦೮-೨೫೬೯ ರಲ್ಲಿ ಮುಳಬಾಗಿಲುಗೆ ಹೋಗುವ ಸಲುವಾಗಿ ಶ್ರೀನಿವಾಸಪುರದಿಂದ ಹೊರಟು ಕದರಿಪುರ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟಾಟಾ ಸುಮೋ ಸಂಖ್ಯೆ ಕೆಎ-೦೩-ಎಂಎ-೬೧೭೧ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಘರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಶ್ರೀಧರ ಮತ್ತು ನಾಗರಾಜ ಎಂಬುವರಿಗೆ ಗಾಯಗಳುಂಟಾಗಿದ್ದು ಚಿಕಿತ್ಸೆಗಾಗಿ ಮುಳಬಾಗಿಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

  •   ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೩-೨೦೦೮ ರಂದು ೧೩೪೦ ಗಂಟೆ ಸಮಯದಲ್ಲಿ ಕೋಲಾರ ಗಾಂಧಿನಗರದ ವಾಸಿ ಶಿವಪ್ಪ ಎಂಬುವರು ಟಿ.ಶ್ರೀನಿವಾಸ ಎಂಬುವರೊಡನೆ ಬಜಾಜ್ ಪಲ್ಸರ್‍ ಸಂಖ್ಯೆ ಕೆಎ-೦೭-ಕ್ಯೂ-೩೪೫೯ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರ ಬೇತಮಂಗಲ ಜಿಗ್ ಜಾಗ್ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಎಪಿ-೦೩-ಎಎಫ್-೬೬೬ ರ ಇನ್ನೋವಾ ಕಾರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪಲ್ಸರ್‍ ವಾಹನಕ್ಕೆ ಡಿಕ್ಕಿ ಹೊಡೆಸಿದ್ದರಿಂದ ವಾಹನದಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್‍. ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

  •   ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೦೧-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮಲ್ಲೇಕುಪ್ಪ ಗ್ರಾಮದ ವಾಸಿಯಾದ ಗಿರಿ ಎಂಬುವರು ತನ್ನ ದ್ವಿಚಕ್ರ ವಾಹನ ಸಂ. ಕೆಎ-೦೭-ಕ್ಯೂ-೨೬೮೪ ರಲ್ಲಿ ಬೈರಕೂರು-ಕಾಡೇನಹಳ್ಳಿ ಮಾರ್ಗದಲ್ಲಿ ಹೋಗುತ್ತಿದ್ದರು. ಅ ಸಮಯದಲ್ಲಿ ಎದರುಗಡೆಯಿಂದ ಬಂದ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೫-೪೨೮೪ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಗಿರಿ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮವಾಗಿ ಗಿರಿ ರವರ ಬಲ ಕಾಲಿಗೆ ಮತ್ತು ಬಲ ತೋಳಿಗೆ ತೀವ್ರ ಗಾಯಗಳಾಗಿರುತ್ತದೆ.

  •   ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೩-೨೦೦೮ ರಂದು ೧೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಯಲವಾರ ಗ್ರಾಮದ ವಾಸಿಯಾದ ಮಂಜುನಾಥ ಎಂಬುವರು ತನ್ನ ಪತ್ನಿಯಾದ ಪ್ರಕೃತರವರೊಂದಿಗೆ ರಾಷ್ಟ್ರೀಯ ಹೆದ್ದಾರಿ-೪ ರ ಮಡೇರಹಳ್ಳಿ ಬಳಿ ತಮ್ಮ ವಿಕ್ಟರ್‍ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಹೆಚ್-೭೭೧೭ ರಲ್ಲಿ ಬರುತ್ತಿದ್ದರು. ಅ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಟಾಟಾ ಇಂಡಿಕಾ ಕಾರಿನ ಸಂಖ್ಯೆ ಕೆಎ-೦೧-ಎಂಸಿ.೨೧೦೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಂಜುನಾಥ ಮತ್ತು ಪ್ರಕೃತ ರವರಿಗೆ ರಕ್ತಗಾಯಗಳಾಗಿರುತ್ತವೆ.

ಮೋಸ / ವಂಚನೆ ಪ್ರಕರಣಗಳು: ೦೧

  •   ಮಾಲೂರು ಪೊಲೀಸ್ ಠಾಣೆಯಲ್ಲಿ ಬಂಗಾರದ ವಡವೆಗಳ ಮೋಸ/ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೩-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಮಾಲೂರು ಪುರದಲ್ಲಿರುವ ಚಮ್ಮನೂರು ಜ್ಯುವೆಲರಿ ಅಂಗಡಿಯಲ್ಲಿ ಯಾರೋ ೪ ಜನ ಅಪರಿಚಿತ ಮಹಿಳೆಯರು ವ್ಯಾಪಾರ ಮಾಡುವ ಉದ್ದೇಶದಿಂದ ಬಂದು ೯೮ ಗ್ರಾಂ ತೂಕದ ಕಳಪೆ ಬಂಗಾರದ ವಡೆವಳನ್ನು ಇಟ್ಟು ಅಪ್ಪಟ ಬಂಗಾರದ ವಡವೆಗಳನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುತ್ತಾರೆ. ಈ ಬಗ್ಗೆ ಅಂಗಡಿಯಲ್ಲಿರುವ ವಿಡಿಯೋ ಕ್ಯಾಮರಾದಲ್ಲಿ ಚಿತ್ರಿಕರಣವಾಗಿರುತ್ತದೆ.

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಮಾಸ್ತಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು .ಉಪ್ಪಾರಹಳ್ಳಿ ಗ್ರಾಮದ ವಾಸಿ ಶೈಲಜಾ (೧೭) ಎಂಬ ಹುಡುಗಿ ಕಾಣೆಯಾಗಿರುತ್ತಾಳೆ. ದಿನಾಂಕ ೨೪-೦೩-೨೦೦೮ ರಂದು ತನ್ನ ಮನೆಯಿಂದ ಜಮೀನಿನ ಕಡೆಗೆ ಹೊರಟ ಶೈಲಜಾ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೪

-ಸ್ಥಳ ದಂಡ ಮೊತ್ತ: ರೂ. ೪೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಮಾರ್ಚ್ ೦೮

March 27, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

  •   ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೩-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬಟ್ರಕುಪ್ಪ ಗ್ರಾಮದ ವಾಸಿ ಶ್ರೀರಾಮರೆಡ್ಡಿ ಮತ್ತು ಇತರೆ ಜನರು ಸರಕು ಸಾಕಾಣಿಕೆ ಆಟೋ ಸಂಖ್ಯೆ ಕೆಎ-೦೭-೫೯೭೮ ರಲ್ಲಿ ತಾವು ಬೆಳೆದಿದ್ದ ರೇಷ್ಮೇ ಗೂಡನ್ನು ತುಂಬಿಕೊಂಡು ವಿಜಯಪುರಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿ- ಟಮಕಾ ಜಿಗ್-ಜಾಗ್ ಬಳಿ ಬರುತ್ತಿದ್ದರು. ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಲಾರಿ ಸಂಖ್ಯೆ ಟಿಎನ್-೨೩-ಎವಿ-೯೧೯೯ ಚಾಲಕ ಕದಿರುವೇಲು ಎಂಬುವನು ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಆಟೋವಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರಿಗೂ ಗಾಯಗಳುಂಟಾಗಿದ್ದು ಪೈಕಿ ಶ್ರೀರಾಮರೆಡ್ಡಿರವರ ತಲೆಗೆ ತೀವ್ರ ಸ್ವರೂಪದ ಗಾಯಗಳುಂಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೧

  •   ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಎನ್ ಹೆಚ್ ೪ ರಸ್ತೆಯ ಆರ್‍.ಟಿ.ಒ ಚೆಕ್ ಪೋಸ್ಟ್ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೭-೦೩-೨೦೦೮ ರಂದು ೧೨೪೫ ಗಂಟೆ ಸಮಯದಲ್ಲಿ ತಮಿಳುನಾಡು ವಾಸಿ ಪಿ.ಪೆರುಮಾಳ್ ತನ್ನ ಲಾರಿ ಸಂಖ್ಯೆ ಕೆಎ-೨೫-ಬಿ-೭೧೬ ಅನ್ನು ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದು ಲಾರಿಯ ಕ್ಲೀನರ್‍ ಹರಿನಾಯ್ಡು ಎಂಬುವರು ವಾಹನದ ದಾಖಲಾತಿಗಳನ್ನು ಪರಿಶೀಲನೆಗಾಗಿ ನೀಡಿ ವಾಪಸ್ಸು ತನ್ನ ಲಾರಿಯ ಕಡೆ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಕಾರ್‍ ಸಂಖ್ಯೆ ಟಿಎನ್-೦೭-ಎಎಕ್ಸ್-೫೧೨೨ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಲಾರಿಯ ಕ್ಲೀನರ್‍ಗೆ ಗಾಯಗಳುಂಟಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ವಿನೋಭನಗರದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೩-೨೦೦೮ ರಂದು ೦೬೦೦ ಗಂಟೆ ಸಮಯದಲ್ಲಿ ಕೋಲಾರ ವಿನೋಭನಗರದ ವಾಸಿ ಶಶಿಕುಮಾರ್‍ (೨೪) ಎಂಬುವರು ತಮ್ಮ ವಾಸದ ಮನೆಯ ಮುಂದೆ ನಿಂತಿದ್ದರು. ಸಮಯದಲ್ಲಿ ಅಲ್ಲಿಗೆ ಬಂದ ಅದೇ ನಗರದ ವಾಸಿಗಳಾದ ರಾಜ ಮತ್ತು ಜಗನ್ನಾಥ ಎಂಬುವರು ಶಶಿಕುಮಾರ್ರವರ ಮೇಲೆ ಜಗಳ ತೆಗೆದು ಕೈಗಳಿಂದ ಹಾಗೂ ನೀಲಗಿರಿ ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಮಾರ್ಚ್ ೦೮

March 26, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

  •   ಮಾಲೂರು ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೨-೨೦೦೮ ರಂದು ೧೦೩೦ ಗಂಟೆ ಸಮಯದಲ್ಲಿ ತಮಿಳುನಾಡು ಹೊಸೂರು ಪಟ್ಟಣದ ವಾಸಿ ಎಂ.ಕುಮಾರ್ರವರು ತನ್ನ ಹೀರೋ ಹೋಂಡಾ ಸ್ಪ್ಲೆಂಡರ್ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ ಟಿಎನ್-೨೪-ವಿ-೧೩೬೧ ನ್ನು ಮಾಲೂರು ತಾಲೂಕು ಚಿಕ್ಕತಿರುಪತಿಯ ಶ್ರೀವೆಂಕಟೇಶ್ವರ ದೇವಸ್ಥಾನದ ಮುಂದೆ ನಿಲ್ಲಿಸಿದ್ದರು. ಆ ಸಮಯದಲ್ಲಿ ಯಾರೋ ಕಳ್ಳರು ಸದರಿ ದ್ವಿಚಕ್ರ ವಾಹನವನ್ನು ಕಳುವು ಮಾಡಿಕೊಂಡಿರುತ್ತಾರೆ. ಬೆಲೆ ರೂ ೩೮,೦೦೦/- ಗಳಾಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ೦೧

  •   ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೨೨೩೦ ಗಂಟೆ ಸಮಯದಲ್ಲಿ ತಮಿಳುನಾಡು ಧರ್ಮಪುರಿ ತಾಲೂಕು ರಾಜಗೊಲ್ಲಹಳ್ಳಿ ಗ್ರಾಮದ ವಾಸಿ ಗೋವಿಂದ ರಾಜು ಮತ್ತು ಆತನ ಸ್ನೇಹಿತ ಏಳುಮಲೈ ಎಂಬುವರು ಎಂಬುವರು ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಟಿಎನ್-೨೯-ಎಬಿ-೦೪೮೨ ರಲ್ಲಿ ಮುಳಬಾಗಿಲು ತಾಲೂಕು ರಾಷ್ಟ್ರೀಯ ಹೆದ್ದಾರಿ-೪ ವಿ-ಗುಟ್ಟಹಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಯಾವುದೋ ಒಂದು ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಗೋವಿಂದ ರಾಜು ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ವಾಹನ ನಿಲ್ಲಿಸದೆ ಹೊರಟು ಹೋಗಿರುತ್ತಾನೆ. ಇದರ ಪರಿಣಾಮವಾಗಿ ಇಬ್ಬರು ಕೆಳಗೆ ಬಿದ್ದು ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಮುಳಬಾಗಿಲು ಸರ್ಕಾರಿ ಆಸ್ಪತ್ರೆ ದಾಖಲಾಗಿದ್ದು ಅಲ್ಲಿ ಏಳುಮಲೈ ಮೃತಪಟ್ಟಿದ್ದು ಗೋವಿಂದರಾಜುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ.

-ಸಾಧಾರಣ: ೦೩

  •   ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ಮಿಲ್ಲತ್‌ನಗರದ ವಾಸಿಯಾದ ಜಮೀರ್‍ ಅಹಮದ್ ಎಂಬುವರು ತನ್ನ ಲಾರಿ ಸಂಖ್ಯೆ ಕೆಎ-೦೩-ಎಬಿ-೬೬೬೯ ನ್ನು ಚಾಲನೆ ಮಾಡಿಕೊಂಡು ಕೋಲಾರ – ಚಿಕ್ಕಬಳ್ಳಾಪುರ ರಸ್ತೆಯ ಸೀಪೂರು ಗೇಟ್ ಬಳಿ ನಿಲ್ಲಿಸಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಕಲ್ಲು ತುಂಬಿದ್ದ ಒಂದು ಲಾರಿಯ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಜಮೀರ್‍ ಅಹಮದ್ ರವರ ಲಾರಿಯ ಎಡಬಾಗಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ ಲಾರಿ ಜಖಂ ಗೊಂಡಿದ್ದು, ಡಿಕ್ಕಿ ಹೊಡೆದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೆ ಹೊರಟು ಹೋಗಿರುತ್ತಾನೆ.

  •   ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಶಿವಪ್ಪ ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೦೯೦ರ ಚಾಲಕ ತನ್ನ ಬಸ್ಸನ್ನು ಚಾಲನೆ ಮಾಡಿಕೊಂಡು ಕೋಲಾರ – ಬೆಂಗಳೂರು ರಸ್ತೆಯ ಮೆಟ್ಟು ಬಂಡೆ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಲಾರಿ ಸಂಖ್ಯೆ ಸಿಟಿಟಿ-೬೮೮೬ ರ ಚಾಲಕ ತನ್ನ ಲಾರಿಯನ್ನು ಯಾವುದೇ ಮುನ್ಸೂಚನೆ ನೀಡದೆ ರಸ್ತೆಯಲ್ಲಿ ನಿಲ್ಲಿಸಿದ್ದರು. ಇದರ ಪರಿಣಾಮ ಬಸ್ಸು ಲಾರಿಯ ಹಿಂಬಾಗಕ್ಕೆ ಡಿಕ್ಕಿ ಹೊಡೆದು ಬಸ್ಸಿನಲ್ಲಿದ್ದ ನಿರ್ವಾಹಕ ಮತ್ತು ಇತರೆ ಪ್ರಯಾಣಿಕರಿಗೆ ಗಾಯಗಳಾಗಿ ಬಸ್ಸು ಜಖಂ ಗೊಂಡಿರುತ್ತದೆ.
  •   ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಚಾಮರೆಡ್ಡಿಹಳ್ಳಿ ಗ್ರಾಮದ ವಾಸಿಯಾದ ಸಿ.ವಿ.ವೆಂಕಟೇಶ್ ಎಂಬುವರು ನಡೆದುಕೊಂಡು ರಾಷ್ಟ್ರೀಯ ಹೆದ್ದಾರಿ-೪ ರ ಕೆ.ಬೈಯಪ್ಪಲ್ಲಿ ಕ್ರಾಸ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಟಾಟಾ ಸುಮೋ ಸಂಖ್ಯೆ ಕೆಎ-೦೧-ಪಿ-೩೨೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ಪಕ್ಕದ ವಿಧ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಕಂಬಗಳನ್ನು ಜಖಂಗೊಳಿಸಿರುತ್ತಾನೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೦೨೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಚಿಕ್ಕತಿರುಪತಿ ಗ್ರಾಮದ ವಾಸಿ ನಾಗೇಶ್ ಮತ್ತು ಅದೇ ಗ್ರಾಮದ ವಾಸಿ ವೆಂಕಟರವಣಪ್ಪ ಎಂಬುವರ ಮದ್ಯೆ ಜಮೀನಿನ ತಕರಾರುಗಳಿದ್ದು, ಕೇಸುಗಳು ಸಹ ದಾಖಲಾಗಿರುತ್ತದೆ. ಈ ದ್ವೇಶದ ಹಿನ್ನೆಲೆಯಲ್ಲಿ ವೆಂಕಟರವಣಪ್ಪ ಮತ್ತು ಇತರೆ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು, ಕೈಯಲ್ಲಿ ಮಾರಕಾಸ್ತ್ರಗಳೊಂದಿಗೆ ನಾಗೇಶ್ ರವರ ಮನೆಯ ಬಳಿ ಬಂದು ಅವಾಚ್ಚ ಶಬ್ದಗಳಿಂದ ಬೈದು ಕಲ್ಲುಗಳಿಂದ ಮನೆಯ ಕಿಟಕಿಯ ಗಾಜುಗಳನ್ನು ಹೊಡೆದು ನಾಶಪಡೆಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ೦೧

  •   ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ದರ್ವೇಶ್ ಮೊಹಲ್ಲ ವಾಸಿ ರಿಜ್ವಾನ್ ರವರು ನಗರ ಸಭೆಯಿಂದ ತಮ್ಮ ಮನೆಗೆ ನೀರಿನ ಸಂಪರ್ಕ ಹಾಕಿಸಿಕೊಳ್ಳುತ್ತಿದ್ದರು. ಸಮಯದಲ್ಲಿ ಕೋಲಾರ ನಗರದ ಫಕೀರ್ಪೇಟೆ ವಾಸಿಗಳಾದ ಎಲ್.ನಜಾಂ ಮತ್ತು ಎಲ್.ನೂರ್ರವರು ಯಾರೋ ನಿನಗೆ ನೀರಿನ ಸಂಪರ್ಕ ಹಾಕಿಸಿಕೊಳ್ಳಲು ಹೇಳಿದ್ದು ಎಂದು ಜಗಳ ತೆಗೆದು ಕೈಯಿಂದ ಹೊಡೆದು ನೋವುಂಟು ಮಾಡಿ ಚಾಕುವಿನಿಂದ ತಿವಿದು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ. ೧೩೦೦ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಮಾರ್ಚ್ ೨೦೦೮

March 25, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಹಲ್ಲೆ

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೩-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಹನುಮನಹಳ್ಳಿ ಗ್ರಾಮದ ವಾಸಿ ಸುರೇಶ್ ಕುಮಾರ್ರವರಿಗೆ ಮುಳಬಾಗಿಲು ತಾಲೂಕು ಆವಣಿ ಗ್ರಾಮದ ವಾಸಿ ಶ್ರೀನಿವಾಸ ಎಂಬುವರು ರೂ ೨೦೦೦ ಗಳನ್ನು ಕೊಡಬೇಕಾಗಿದ್ದು ಅದನ್ನು ಸುರೇಶ್ ಕುಮಾರ್ಕೇಳಿದ್ದಕ್ಕೆ ಶ್ರೀನಿವಾಸ ಮತ್ತು ಇತರೆ ೪ ಜನರು ನಿನಗೆ ಯಾವುದು ಹಣ ನೀಡಬೇಕಾಗಿಲ್ಲ ಎಂದು ಜಗಳ ತೆಗೆದು ಅವಾಚ್ಚ್ಯ ಶಬ್ಧಗಳಿಂದ ಬೈದು ಹಲ್ಲೆ ಮಾಡಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೦

-ಸ್ಥಳ ದಂಡ ಮೊತ್ತ: ರೂ.೧೦೦೦

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಮಾರ್ಚ್‌ ೨೦೦೮

March 25, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೩-೨೦೦೮ ರಂದು ೧೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕದರಿಪುರ ಗ್ರಾಮದ ವಾಸಿಯಾದ ಕ್ರಿಷ್ಣಪ್ಪ ಎಂಬುವರು ಚೋಳಘಟ್ಟ ಗ್ರಾಮದ ಬಳಿ ಹುಣಸೇಕಾಯಿ ಉದುರಿಸುತ್ತಿದ್ದರು. ಆಸಮಯದಲ್ಲಿ ಹುಣಸೇಮರದ ಕೊಂಬೆ ಮುರಿದು ಕೆಳಗೆ ಬಿದ್ದ ಕ್ರಿಷ್ಣಪ್ಪ ರವರ ತೊಡೆಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍. ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಕಾರಿಯಾಗದೆ ದಿನಾಂಕ ೨೩-೦೩-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ. ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಮಾರ್ಚ್ ೦೮

March 24, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೩-೨೦೦೮ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ವೇಮಗಲ್ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ಇಲಾಖೆಯ ಟ್ರಾನ್ಸ ಪಾರ್ಮರ್ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೩-೨೦೦೮ ರಾತ್ರಿ ಕೋಲಾರ ತಾಲೂಕು ಬಂತಿಗಾನಹಳ್ಳಿ ಗ್ರಾಮದ ಬಳಿ ಅಳವಡಿಸಿದ್ದ ವಿಧ್ಯುತ್ ಟ್ರಾನ್ಸ್ ಪಾರ್ಮರ್ ನ್ನು ಯಾರೋ ಕಳ್ಳರು ಗೂಡ್ಸ್ ಆಟೋ ಸಂಖ್ಯೆ ಕೆಎ-೦೭-೫೪೬೩ ರಲ್ಲಿ ಕಳುವು ಮಾಡಿಕೊಂಡು ಹೋಗಿರುತ್ತಾರೆ. ಬಗ್ಗೆ ವೇಮಗಲ್ ಬೆಸ್ಕಾಂ ಶಾಖಾಧಿಕಾರಿಗಳಾದ ಶ್ರೀ ಎಸ್.ಹರೀಷ್ ಕುಮಾರ್ ಎಂಬುವರು ದೂರನ್ನು ನೀಡಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೩-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮರಕಲಘಟ್ಟ ಗ್ರಾಮದ ವಾಸಿಗಳಾದ ವೆಂಕಟಾಚಲಪತಿ ಮತ್ತು ಆತನ ಸ್ನೇಹಿತ ಶ್ರೀನಿವಾಸ ಎಂಬುವರು ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೦-ಹೆಚ್-೩೩೨೧ ರಲ್ಲಿ ಕೋಲಾರ ತಾಲೂಕು ಪುರಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಸಮಯದಲ್ಲಿ ಹಿಂದುಗಡೆಯಿಂದ ಬಂದ ಆಟೋ ಚಾಲಕ ತನ್ನ ಆಟೋ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟಾಚಲಪತಿ ರವರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮವಾಗಿ ಇಬ್ಬರು ಕೆಳಗೆ ಬಿದ್ದು ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ಮಾಲೂರು ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಆರ್.ಟಿ.ಸಿ. ನಿರ್ವಾಹಕನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೩-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ನಾಗರಾಜರೆಡ್ಡಿ, ನಿರ್ವಾಹಕ, ಕೆ.ಎಸ್.ಆರ್.ಟಿ.ಸಿ, ಮಾಲೂರು ಡಿಪೋ ರವರು ಬಸ್ಸು ಸಂಖ್ಯೆ ಕೆಎ-೦೭-ಎಫ್-೧೦೭೫ ರಲ್ಲಿ ನಿರ್ವಾಹಕನಾಗಿ ಹೊಸಕೋಟೆ - ಮಾಲೂರು ರಸ್ತೆಯ ಹಾರೋಹಳ್ಳಿ ಬಳಿ ಬರುತ್ತಿದ್ದರು. ಸಮಯದಲ್ಲಿ ಯಾರೋ ಜನರು ಸೈಕಲ್ ನಲ್ಲಿ ಬರುತ್ತಿದ್ದು, ಒಬ್ಬನು ಬಸ್ಸನ್ನು ಓವರ್ ಟೇಕ್ ಮಾಡಿಕೊಂಡು ಹೋಗಿದ್ದನ್ನು ನಾಗರಾಜರೆಡ್ಡಿ ಕೇಳಿದ್ದಕ್ಕೆ ಅವಾಚ್ಚ ಶಬ್ದಗಳಿಂದ ಬೈದು ಬಲಗೈ ಮುಷ್ಢಿಯಿಂದ ನಾಗರಾಜರೆಡ್ಡಿ ರವರ ಮುಖಕ್ಕೆ ಗುದ್ದಿದ್ದು ಮುಂಬಾಗದ ಹಲ್ಲುಗಳು ಅಲಗಾಡುತ್ತಿದ್ದು ರಕ್ತಗಾಯವಾಗಿ ಸರ್ಕಾರಿ ಕೆಲಸ ನಿರ್ವಹಿಸದಂತೆ ತೊಂದರೆ ಮಾಡಿರುತ್ತಾರೆಂದು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

  •   ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೩-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಗುಣಿಗುಂಟಿ ಪಾಳ್ಯದ ವಾಸಿಯಾದ ದೇವರಾಜ್ ಎಂಬುವರು ಬಜಾರ ಬೀದಿಯಲ್ಲಿ ತಿಮ್ಮಪ್ಪ ಎಂಬುವರು ಅಂಗಡಿ ಮುಂದೆ ನಿಂತಿದ್ದರು. ಸಮಯದಲ್ಲಿ ಮುಳಬಾಗಿಲಿನ ವಾಸಿಗಳಾದ ನಾಗರಾಜ್ ಮತ್ತು ಇತರೆ ಇಬ್ಬರು ಅಲ್ಲಿಗೆ ಬಂದು ಹಣದ ವಿಚಾರದಲ್ಲಿ ಜಗಳ ಮಾಡಿ ಕಾಲುಗಳಿಂದ ಒದ್ದು, ಕಲ್ಲಿನಿಂದ ಹೊಡೆದು ಎರಡು ದವಡೆ ಹಲ್ಲುಗಳನ್ನು ಮುರಿದು ನೀನು ಹಣ ಕೊಡದೆ ಹೋದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ. ೧೧೦೦

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.