ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೫-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೧
ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೫-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಬೆಟ್ಟಹಳ್ಳಿ ಗ್ರಾಮದ ವಾಸಿ ಕೃಷ್ಣ ಎಂಬುವರು ತಮ್ಮ ಗ್ರಾಮದ ಗೇಟ್ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಆ ಸಮಯದಲ್ಲಿ ಮಾಲೂರು ಕಡೆಯಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೫೫೧ ರ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ಕೃಷ್ಣ ರವರಿಗೆ ತೀವ್ರವಾದ ಗಾಯಗಳುಂಟಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
-ಸಾಧಾರಣ: ೦೨
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೫-೨೦೦೮ ರಂದು ೧೮೧೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಕುಂದಲಗುರ್ಕಿ ಗ್ರಾಮದ ವಾಸಿ ನಾಗರಾಜ ಮತ್ತು ಶ್ರೀರಾಮ ಎಂಬುವರು ಕೆಎ-೦೭-ಕೆ-೩೮೯೫ ಸಂಖ್ಯೆಯ ದ್ವಿಚಕ್ರವಾಹನದಲ್ಲಿ ಕೋಲಾರ ತಾಲೂಕು ಚುಂಚದೇನಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೩-ಸಿ-೪೩೯೩ ರ ಚಾಲಕ ತನ್ನ ಟೆಂಪೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಾದ ನಾಗರಾಜ ಮತ್ತು ಶ್ರೀರಾಮ ರವರಿಗೆ ಗಾಯಗಳುಂಟಾಗಿರುತ್ತದೆ.
ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೫-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಚನ್ನಕಲ್ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರು ತಮ್ಮ ಗ್ರಾಮದ ಬಳಿ ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಹೀರೋಹೋಂಡಾ ಸಂಖ್ಯೆ ಕೆಎ-೦೮-ಕೆ-೧೯೮೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ವೆಂಕಟೇಶಪ್ಪರವರಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ನ್ಯಾಯಾಲಯ ಆವರಣದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೨-೦೫-೨೦೦೮ ರಂದು ೧೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಹೊಸೂರು ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಮೇಲೆ ಜಗಳ ತೆಗೆದ ಮಂಜುನಾಥ, ಕಲ್ಲಂಡೂರು ಲೋಕೇಶ್, ಕೆಂಬೋಡಿ ರಮೇಶ್ ಮತ್ತು ಅಬ್ಬಿಣಿ ಆನಂದ್ ಎಂಬುವರ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಮಾಡಿ ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ರಾಜಕೀಯ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಕೀಲುಕೋಟೆಯ ವಾಸಿ ನಾಗವೇಣಿ (೧೮) ಎಂಬುವರು ಮೃತಪಟ್ಟವರು. ದಿನಾಂಕ ೧೩-೦೫-೨೦೦೮ ರಂದು ನಾಗವೇಣಿ ತನ್ನ ವಾಸದಮನೆಯಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮೃತಪಟ್ಟಿರುತ್ತಾಳೆ. ಮರಣಕ್ಕೆ ನಿಖರವಾದ ಕಾರಣ ತಿಳಿದು ಬಂದಿರುವುದಿಲ್ಲ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೦೫
-ಸ್ಥಳ ದಂಡ ಮೊತ್ತ: ರೂ. ೧೦೦೦/
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


