ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ದೂಲಪಲ್ಲಿ ಗ್ರಾಮದ ವಾಸಿ ಜಯರಾಮಪ್ಪ ಎಂಬುವರ ಕೆಎ-೦೭-ಕ್ಯೂ-೨೭೨೦ ಸಂಖ್ಯೆಯ ಟಿ.ವಿ.ಎಸ್.ಎಕ್ಸ್.ಎಲ್ ದ್ವಿಚಕ್ರವಾಹನ ಕಳುವಾಗಿರುತ್ತದೆ. ಜಯರಾಮಪ್ಪ ರವರು ತನ್ನ ವಾಹನವನ್ನು ದಿನಾಂಕ ೦೨-೦೨-೨೦೦೮ ರಂದು ರಾತ್ರಿ ತನ್ನ ವಾಸದಮನೆಯ ಮುಂದೆ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ೨೫,೩೦೦/ ಆಗಿರುತ್ತದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಮತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೯-೨೦೦೮ ರಂದು ೧೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಜಮ್ಮನಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ತಮ್ಮ ಮಕ್ಕಳಾದ ಮನು ಮತ್ತು ಲಕ್ಷ್ಮಿ ಎಂಬುವರೊಂದಿಗೆ ತನ್ನ ದ್ವಿಚಕ್ರವಾಹನ ಟಿ.ವಿ.ಎಸ್ ಸೂಪರ್ ಎಕ್ಸ್.ಎಲ್ ಸಂಖ್ಯೆ ಕೆಎ-೦೭-ಎಲ್-೩೨೨೧ ರಲ್ಲಿ ತಮ್ಮ ಗ್ರಾಮದ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಮಾರುತಿ ಓಮಿನಿ ಕಾರ್ ಸಂಖ್ಯೆ ಟಿ.ಎನ್-೦೭-ಎ.ವೈ-೦೮೬೭ ರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಚಿಕ್ಕತಿರುಪತಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೯-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಚಿಕ್ಕತಿರುಪತಿ ಗ್ರಾಮದ ವಾಸಿ ಮುನಿಯಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಾಂತಮ್ಮ ಮತ್ತು ಶ್ರೀನಿವಾಸ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಪಿ.ಸಿ.ಬಡಾವಣೆಯ ವಾಸಿ ತೇಜಸ್ವಿನಿ (೨೪) ಎಂಬುವರು ಮೃತಪಟ್ಟವರು. ದಿನಾಂಕ ೨೪-೦೯-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಆಕಸ್ಮಿಕ ಸುಟ್ಟಗಾಯಗಳಾದ ದೆಸೆಯಿಂದ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ವಿನಿ ರವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೯-೦೯-೨೦೦೮ ರಂದು ೦೬೩೦ ಗಂಟೆಗೆ ಮೃತಪಟ್ಟಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ:
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



