ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೧-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೨
ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೨-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ವೆಂಕರಾಜನಹಳ್ಳಿ ಗ್ರಾಮದ ವಾಸಿ ರೋಜಮ್ಮ ಎಂಬುವರು ಕೆಎ-೦೭-೩೨೭೦ ಸಂಖ್ಯೆಯ ಆಟೋವಿನಲ್ಲಿ ಟೇಕಲ್ ನಿಂದ ತಮ್ಮ ಊರಿಗೆ ಹೋಗುವ ಸಲುವಾಗಿ ಕೆಜಿ ಹಳ್ಳಿ-ಗೋಪಸಂದ್ರ ಟಾರ್ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್ ಸಂಖ್ಯೆ ಕೆಎ-೦೮-ಟಿ-೨೪೮೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋವಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರೋಜಮ್ಮರವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮೂಲತಃ ಉಡುಪಿ ಜಿಲ್ಲೆ ವಾಸಿ ಪ್ರಸ್ತುತ ಕೋಲಾರದ ಗುರುಪ್ರಷಾದ್ ಹೋಟೆಲಿನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದ ನಾಗೇಶಪೂಜಾರಿ ಎಂಬುವರು ನರಸಿಂಹ ಎಂಬುವರೊಡನೆ ಅಡುಗೆ ಕೆಲಸಕ್ಕಾಗಿ ಕೊಂಡರಾಜನಹಳ್ಳಿಗೆ ಹೋಗಿದ್ದು ಅಲ್ಲಿಂದ ಹಿಂತಿರುಗಿ ಕೋಲಾರಕ್ಕೆ ಬರುವ ಸಲುವಾಗಿ ದಿನಾಂಕ ೨೮-೦೨-೨೦೦೯ ರಂದು ೨೩೩೦ ಗಂಟೆ ಸಮಯದಲ್ಲಿ ಎನ್.ಹೆಚ್ ೪ ರಸ್ತೆಯ ಆರ್.ಎಂ.ಸಿ ಯಾರ್ಡ್ ಬಳಿ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಟ್ರಾಕ್ಟರ್ ಸಂಖ್ಯೆ ಕೆಎ-೦೭-ಟಿ-೩೧೯೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ನಾಗೇಶಪೂಜಾರಿ ರವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಚಿಕಿತ್ಸೆಗಾಘಿ ಎಸ್.ಎನ್.ಆರ್ ಆಸ್ಪತ್ರೆಗೆ ಸಾಗಿಸು ಮಾರ್ಗಮಧ್ಯ ಮೃತಪಟ್ಟಿರುತ್ತಾರೆ.
-ಸಾಧಾರಣ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೨-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ಬಾರ್ ಒಂದರಲ್ಲಿ ಕೆಲಸ ಮಾಡುತ್ತಿರುವ ರಾಜು ಎಂಬುವರು ಹೀರೋಹೋಂಡಾ ಪ್ಯಾಷನ್ ಸಂಖ್ಯೆ ಕೆಎ-೦೮-ಜೆ-೫೭೦೩ ರಲ್ಲಿ ಮಾಲೂರು ಪುರದ ಹಾರೋಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ಟ್ರಾಕ್ಟರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರಾಜುವಿನ ಎರಡೂ ಕಾಲು ಮತ್ತು ಇತರೇ ಕಡೆಗಳಲ್ಲಿ ಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೨-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕರಿನಾಯಕನಹಳ್ಳಿ ಗ್ರಾಮದ ವಾಸಿಯಾದ ಶ್ರೀಮತಿ ಚಿನ್ನಮ್ಮ ಎಂಬುವರು ತಮ್ಮ ಮನೆಯಲ್ಲಿದ್ದರು. ಅ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಕ್ರಿಷ್ಣಪ್ಪ ಮತ್ತು ೪ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಕೈಗಳಿಂದ ಮತ್ತು ಕಾಲುಗಳಿಂದ ಚಿನ್ನಮ್ಮ ರವರಿಗೆ ಹೊಡೆದು ಜುಟ್ಟು ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾನೆ. ಈ ಕೃತ್ಯಕ್ಕೆ ಸರ್ವೆ ನಂ ೭೯ ರ ಜಮೀನು ವಿಚಾರವೇ ಕಾರಣವಾಗಿರುತ್ತದೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



