ದಿನದ ಅಪರಾಧಗಳ ಪಕ್ಷಿನೋಟ ೦೧ ನೇ ಏಪ್ರಿಲ್ ೨೦೦೯

March 31, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೦೪-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಕಳವುಮಾಡುವ ಉದ್ದೇಶದಿಂದ ನಿಧಿಶೋಧನೆ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೩-೨೦೦೯ ರಂದು ಕೋಲಾರ ತಾಲೂಕು ಕಾಜಿಕಲ್ಲಹಳ್ಳಿ ಗ್ರಾಮದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಬೆಟ್ಟದಲ್ಲಿ ರವಿ, ಕೃಷ್ಣಪ್ಪ, ರಾಮಪ್ಪ, ಅಮರೇಶ ಮತ್ತು ಶಂಕರಪ್ಪ ಎಂಬುವರು ಕಳ್ಳತನ ಮಾಡುವ ಉದ್ದೇಶದಿಂದ ಭೂಮಿಯನ್ನು ಅಗೆದು ನಿಧಿಶೋಧನೆ ಮಾಡಿರುತ್ತಾರೆ. ಈ ಬಗ್ಗೆ ಕಾಜಿಕಲ್ಲಹಳ್ಳಿ ಗ್ರಾಮದ ವಾಸಿ ನಂದೀಶರವರು ದೂರು ನೀಡಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೩೧-೦೩-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಪುಣ್ಯಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರಿಗೆ ಅದೇ ಗ್ರಾಮದ ವಾಸಿ ಸುಬ್ರಮಣಿ ಎಂಬುವರು ಮಕ್ಕಳು ಗಲಾಟೆ ಮಾಡಿಕೊಂಡ ವಿಚಾರದಲ್ಲಿ ಜಗಳ ತೆಗೆದು ಕಲ್ಲಿನಿಂದ ನಾರಾಯಣಸ್ವಾಮಿ ರವರ ಮುಖಕ್ಕೆ ಹೊಡೆದ ಪರಿಣಾಮ ನಾಲ್ಕು ಹಲ್ಲುಗಳು ಉದುರಿಬಿದ್ದು ರಕ್ತಗಾಯವಾಗಿರುತ್ತದೆ.

ಇತರೆ: ೦೩

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೩-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬಂಬಡಿ ನಗರದ ಗ್ರಾಮದ ವಾಸಿ ಪೀರ್‍ ಸಾಬ್ (೪೫) ಎಂಬುವರು ತನ್ನ ಪೆಟ್ಟಿಗೆ ಅಂಗಡಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಭಾವುಟವನ್ನು ಹಾಕಿ ನೀತಿಸಂಹಿತೆ ಉಲ್ಲಂಘನೆ ಮಾಡಿರುತ್ತಾರೆ. ಈ ಬಗ್ಗೆ ಕೋಲಾರ ವಿಭಾಗ ಗಣೀ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿಯಾದ ನಾಗರಾಜ.ಎಸ್.ಅರ್‍ ರವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ಸಹಾಯಕ ಕಮೀಷನರ್‍ ರವರಾದ ಶ್ರೀಮತಿ ಅರ್ಚನಾ ರವರು ನೀಡಿದ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೯ ರಂದು ಕೋಲಾರ ನಗರ ಸ್ಟೇಡಿಯಂ ಆವರಣದ ಬಳಿ ಕಾಂಗ್ರೆಸ್ ಪಕ್ಷದ ಮೆರವಣಿಗೆಗೆ ಆಗಮಿಸಿದ್ದ ವಾಹನಗಳ ಮೇಲೆ ಪಕ್ಷದ ಬ್ಯಾನರ್‍ ಮತ್ತು ಭಾವುಟಗಳನ್ನು ಹಾರಿಸಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿರುತ್ತದೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ಸಹಾಯಕ ಕಮೀಷನರ್‍ ರವರಾದ ಶ್ರೀಮತಿ ಅರ್ಚನಾ ರವರು ನೀಡಿದ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೯ ರಂದು ಕೋಲಾರ ನಗರ ಜೂನಿಯರ್‍ ಕಾಲೇಜ್ ಆವರಣದ ಬಳಿ ಬಿ.ಜೆ.ಪಿ ಪಕ್ಷದ ಯುವಮೋರ್ಚಾ ಸಮಾವೇಶಕ್ಕೆ ಆಗಮಿಸಿದ್ದ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಿ ಆಮಿಷ ಒಡ್ಡಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿರುತ್ತದೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೫

-ಸ್ಥಳ ದಂಡ ಮೊತ್ತ:  ರೂ. ೮೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಮದ್ಯ ಮಾರಾಟ, ರೂ. ೨,೧೬೦/- ಬೆಲೆಯ ಮದ್ಯ ವಶ: ಒಬ್ಬನ ಬಂದನ:

March 31, 2009

ದಿನಾಂಕ ೩೧-೦೩-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ  ಮಾಸ್ತಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ರವರಾದ ಶ್ರೀ ಮಂಜುನಾಥ ಎಂ.ಎನ್. ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಮಾಲೂರು ತಾಲೂಕು ದಿನ್ನಹಳ್ಳಿ ಗ್ರಾಮದ ನಾರಾಯಣಪ್ಪ ರವರ ವಾಸದ ಮನೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ ರೂ ೨,೧೬೦/- ರೂ ಬೆಲೆಬಾಳುವ ೧೭ ಬಿಯರ್‍, ೪ ಸೂಪರ್‌ ಜಾಕ್ ವಿಸ್ಕಿ ಮತ್ತು ೧೪ ಓಲ್ಡ್‌ ಟವರಿನ್ ವಿಸ್ಕಿ ಬಾಟಲ್‌ಗಳನ್ನು ವಶಪಡಿಸಿಕೊಂಡು ನಾರಾಯಣಪ್ಪ ಎಂಬುವರನ್ನು ಬಂದಿಸಿರುತ್ತಾರೆ.   ಈ ಬಗ್ಗೆ ಮಾಸ್ತಿ ಪೊಲೀಸ್ ಠಾಣೆಯಲ್ಲಿ  ಕರ್ನಾಟಕ ಅಭ್ಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಜೂಜಾಟ ದಾಳಿ:೨೬ ಜನರ ಬಂಧನ, ರೂ ೩೯,೫೨೦/- ಮತ್ತು ೧೬ ಮೊಬೈಲ್ ಫೋನ್ ವಶ:

March 31, 2009

ದಿನಾಂಕ ೩೧-೦೩-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಕೋಲಾರ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಫಣೀಂದ್ರ ಸಿಂಗ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಮುಳಬಾಗಿಲು ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎ.ಬೇಗ್ ರವರು ತಮ್ಮ ಸಿಬ್ಬಂದಿಯೊಂದಿಗೆ ಮುಳಬಾಗಿಲು ಪಟ್ಟಣದ ಹೆಲ್ತ್ & ಸ್ಪೋರ್ಟ್ಸ್ ಕ್ಲಬ್ ಮೇಲೆ ದಾಳಿ ಮಾಡಿ ಹಣವನ್ನು ಪಣವಾಗಿಟ್ಟು ಅಂದರ್‍ ಬಾಹರ್‍ ಜೂಜಾಟದಲ್ಲಿ ತೊಡಗಿದ್ದ ಬಾಬಣ್ಣ ಮತ್ತು ಇತರೆ ೨೫ ಜನರನ್ನು ಬಂಧಿಸಿ, ಪಣವಾಗಿಟ್ಟಿದ್ದ ರೂ. ೩೯,೫೨೦/- ಮತ್ತು ೧೬ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ  ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೧ ನೇ ಮಾರ್ಚ್ ೨೦೦೯

March 31, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೩-೨೦೦೯ ರಮದು ೦೯೩೦ ಗಂಟೆ ಸಮಯದಲ್ಲಿ ಮಾಲೂರು ಪುರ ಇಂದಿರಾನಗರದ ವಾಸಿ ವೆಂಕಟೇಶಪ್ಪ, ಸುಶೀಲಮ್ಮ, ಮುನಿಯಮ್ಮ ಎಂಬುವರು ಮಾಲೂರು ಪುರದ ಮಾಸ್ತಿ ವೃತ್ತದಲ್ಲಿ ನಿಂತಿದ್ದರು. ಆ ಸಮಯದಲ್ಲಿ ಕೆಎ-೦೫-ಬಿ-೭೧೫ ಆಟೋ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದಿದ್ದು ಆಟೋ ನಿಯಂತ್ರಣ ತಪ್ಪಿ ನಿಂತಿದ್ದವರ ಮೇಲೆ ಬಿದ್ದಿರುತ್ತದೆ. ಇದರ ಪರಿಣಾಮ ವೆಂಕಟೇಶಪ್ಪ ಮತ್ತು ಅಲ್ಲಿದ್ದ ಇತರರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸ್ವತ್ತುಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೩೦-೦೩-೨೦೦೯ ರಂದು ೨೨೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಠಪುರ ಗ್ರಾಮದ ವಾಸಿ ರಾಮಕೃಷ್ಣಪ್ಪ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಗೆ ಯಾರೋ ಅಪರಿಚಿತರು ಬೆಂಕಿ ಇಟ್ಟಿರುತ್ತಾರೆ. ಇದರ ಪರಿಣಾಮ ಒಂದು ಕರು ೨೦ ಕೋಳಿಗಳು ಮತ್ತು ಒಂದು ಕುರಿ ಸಾವಿಗೀಡಾಗಿದ್ದು ೫ ಕುರಿಗಳಿಗೆ ಸುಟ್ಟಗಾಯಗಳಾಗಿರುತ್ತದೆ. ಕೊಟ್ಟಿಗೆಯಲ್ಲಿ ಇಂದು ಸೈಕಲ್ ಸಹಾ ಸುಟ್ಟು ಹೋಗಿರುತ್ತದೆ. ಈ ಬಗ್ಗೆ ರಾಮಕೃಷ್ಣಪ್ಪ ರವರು ದೂರುನೀಡಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕುರುಡುಮಲೆ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೦-೦೩-೨೦೦೯ ರಂದು ಕುರುಡುಮಲೆ ಗ್ರಾಮದಲ್ಲಿರುವ ಮುಜುರಾಯಿ ಇಲಾಖೆಗೆ ಸೇರಿದ ಶ್ರೀ ವಿನಾಯಕ ದೇವಾಲಯವನ್ನು ಕರ್ನಾಟಕ ಸರ್ಕಾರದ ಸಚಿವರಾದ ಕೃಷ್ಣಯ್ಯ ಶೆಟ್ಟಿ ಹಾಗೂ ವೀರಯ್ಯ ಇನ್ನಿತರರು ಚುನಾವಣಾ ಪ್ರಚಾರಕ್ಕೆ ಉಪಯೋಗಿಸಿಕೊಂಡು ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿರುತ್ತಾರೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:  ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಮಾರ್ಚ್ ೨೦೦೯

March 29, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೦-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೩-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶ ಚಿತ್ತೂರು ಜಿಲ್ಲೆಯ ವಾಸಿ ಕೆ.ಮಾರ್ಕೊಂಡೇಯ ಎಂಬುವರು ಎಪಿ-೦೩-ಎಎ-೩೨೫೭ ದ್ವಿಚಕ್ರವಾಹನದಲ್ಲಿ ಮುಳಬಾಗಿಲಿನಿಂದ ತಮ್ಮ ಗ್ರಾಮಕ್ಕೆ ಹೋಗುವ ಸಲುವಾಗಿ ಹೋಗುತ್ತಿದ್ದು ಬಹಿರ್ದೆಸೆ ಸಲುವಾಗಿ ಎನ್.ಹೆಚ್ ೪ ರಸ್ತೆಯ ಸಮೀಪದ ಸೀಗೇನಹಳ್ಳಿ ಕೆರೆ ಬಳಿ ವಾಹನವನ್ನು ನಿಲ್ಲಿಸಿ ಹೋಗಿದ್ದರು.  ಆ ಸಮಯದಲ್ಲಿ ಚೆನ್ನೈ ಕಡೆಯಿಂದ ಬಂದ ಟಾಟಾ ಇಂಡಿಕಾ ಕಾರ್‍ಸಂಖ್ಯೆ ಕೆಎ-೦೪-ಎಂಎ-೮೯೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ, ಇದರಪರಿಣಾಮ ಕಾರ್‍ಆಯ ತಪ್ಪಿ ಕೆರೆಯೊಳಗೆ ಬಿದ್ದಿದ್ದು ಕಾರಿನಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.    

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೩-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬ್ಯಾಲಹಳ್ಳಿ ಗ್ರಾಮದ ವಾಸಿ ಬಿ.ಸಿ.ವಿಶ್ವನಾಥ (೨೬) ಎಂಬುವರು ತಮ್ಮ ದ್ವಿಚಕ್ರವಾಹನದಲ್ಲಿ ತಮ್ಮ ಗ್ರಾಮದಿಂದ ಕೋಲಾರಕ್ಕೆ ಬರುವ ಸಲುವಾಗಿ ಹೊರಟು ಕೋಲಾರ-ಮಣಿಘಟ್ಟ ರಸ್ತೆಯ ಮಾರ್ಜೇನಹಳ್ಳಿ ಕುಡಿಯಪ್ಪ ರವರ ನೀಲಗಿರಿ ತೋಪಿನ ಬಳಿ ಮೂತ್ರ ವಿಸರ್ಜನೆಗಾಗಿ ದ್ವಿಚಕ್ರವಾಹನವನ್ನು ನಿಲ್ಲಿಸಿ ಇವರು ರಸ್ತೆ ಬದಿ ನಿಂತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಆಟೋ ಸಂಖ್ಯೆ ಕೆಎ-೦೭-೮೩೯೦ ರ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ವಿಶ್ವನಾಥರವರಿಗೆ ಗಾಯಗಳುಂಟಾಗಿರುತ್ತದೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೩-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಟೇಕಲ್ ರಸ್ತೆಯಲ್ಲಿ ಕೆಎ-೦೭-ಕೆ-೬೭೯೯ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲಾರ ನಗರ ಪಿ.ಸಿ ಬಡಾವಣೆಯ ವಾಸಿಯಾದ ಕೃಷ್ಣಪ್ಪ ಎಂಬುವರಿಗೆ ಡಿಕ್ಕಿ ಹೊಡೆಸಿ ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಹೊರಟುಹೋಗಿರುತ್ತಾನೆ. ಇದರ ಪರಿಣಾಮ ಕೃಷ್ಣಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಅರಬಿಕೊತ್ತನೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೩-೨೦೦೯ ರಂದು ೨೨೩೦ ಗಂಟೆ ಸಮಯದಲ್ಲಿ ಅರಬಿಕೊತ್ತನೂರು ಗ್ರಾಮದ ವಾಸಿ ಲಕ್ಷ್ಮಮ್ಮ (೬೦) ಎಂಬುವರು ತಮ್ಮ ವಾಸದ ಮನೆಯಲ್ಲಿದ್ದರು. ಆ ಸಮಯದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ ಅದೇ ಗ್ರಾಮದ ವಾಸಿ ನಾರಾಯಣಪ್ಪ ಮತ್ತಿತರರು ಲಕ್ಷ್ಮಮ್ಮ ರವರ ಮೇಲೆ ಜಗಳ ತೆಗೆದು ಇವರ ಗಂಡ ಹಾಗೂ ಮಗಳಿಗೆ ಕೈಗಳಿಂದ ದೊಣ್ಣೆಗಳಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಗುಲಿಗಾನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೩-೨೦೦೯ ರಂದು ೧೧೧೫ ಗಂಟೆ ಸಮಯದಲ್ಲಿ ಗಿಲಿಗಾನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ (೬೦) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ  ಮಂಜುನಾಥ ಮತ್ತು ಕಾರ್ತಿಕ್ ಎಂಬುವರು ಕೈಗಳಿಂದ ದೊಣ್ಣೆಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ. ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:  ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಮದ್ಯ ಮಾರಾಟ, ರೂ ೨೩,೭೫೦/ ಬೆಲೆಯ ಮದ್ಯ ವಶ, ಒಬ್ಬರ ಬಂಧನ

March 29, 2009

ದಿನಾಂಕ ೨೯-೦೩-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಮಾಲೂರು ಪೊಲೀಸ್ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ಚನ್ನಯ್ಯ ಹಿರೇಮಠ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಡನೆ ಮಾಲೂರು ತಾಲೂಕು ಆಲಂಬಾಡಿ ಗೇಟ್ ಬಳಿ ರತ್ನಮ್ಮ ಎಂಬುವರ ಅಂಗಡಿಯ ಮೇಲೆ ದಾಳಿ ನಡೆಸಿರುತ್ತಾರೆ. ರತ್ನಮ್ಮ ರವರು ತನ್ನ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ  ಮದ್ಯವನ್ನು ಮಾರಾಟ ಮಾಡುತ್ತಿದ್ದು ಸಿಕ್ಕಿ ಬಿದ್ದಿರುತ್ತಾರೆ. ಕಾರ್ಯಾಚರಣೆ ವೇಳೆ ರೂ. ೨೩,೭೫೦/ ಬೆಲೆ ಬಾಳುವ ಮದ್ಯ ಮತ್ತು ಕೆಎ-೦೨-ಎಂ-೮೦೦೯ ಸಂಖ್ಯೆಯ ಮಾರುತಿ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಮಾರ್ಚ್ ೨೦೦೯

March 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಪಿ.ಸಿ ಬಡಾವಣೆಯ ವಾಸಿ ಹೆಚ್.ವಿ.ನಂಜುಂಡಯ್ಯ ಎಂಬುವರ ವಾಸದ ಮನೆಯಲ್ಲಿ ಕೃತ್ಯ ಸಂಭವಿಸಿರುತ್ತದೆ.  ನಂಜುಂಡಯ್ಯ ರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಚಿಂತಾಮಣಿಗೆ ಹೋಗಿದ್ದು ದಿನಾಂಕ ೨೭-೦೩-೨೦೦೯ ರಂದು ೦೮೦೦ ಗಂಟೆ ಸಮಯದಲ್ಲಿ ಮನೆಯ  ಡೋರ್‍ ಲಾಕ್ ಮುರಿದು ಮನೆಯೊಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯ ರೂಂನಲ್ಲಿದ್ದ ಬೀರುವನ್ನು ತೆಗೆದು ಅದರಲ್ಲಿದ್ದ ಚಿನ್ನಾಭರಣಗಳು ರೂ ೫೦೦೦/ ನಗದು ಸೇರಿದಂತೆ ಒಟ್ಟು ರೂ. ೧,೫೦,೦೦೦/ ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೩-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಚಂಬೆ ಗ್ರಾಮದ ವಾಸಿ ನಾರಾಯಣಸ್ವಾಮಿ ವಿ ಎಂಬುವರು  ತನ್ನ ಓಮ್ನಿ ಕಾರು ಸಂಖ್ಯೆ ಕೆಎ-೦೮-ಎಂ-೧೦೫೭ ರಲ್ಲಿ ತಮ್ಮ ಕುಟುಂಬ ಸಮೇತ ಕೋಲಾರ ತಾಲೂಕು ವೇಮಗಲ್ ಗ್ರಾಮದ ಬೈಪಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ  ಕಾರಿನ ಚಾಲಕ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ನೇರಳೆ ಡಿಕ್ಕಿ ಹೊಡೆಸಿದ್ದು, ಕಾರಿನಲ್ಲಿದ್ದ ಭಾರತಿ, ಮಂಜುನಾಥ ಮತ್ತು ಮಮತ ರವರಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರ ನರೇಂದ್ರ ಕ್ಲಿನಿಕ್‌ಗೆ ದಾಖಲಾಗಿರುತ್ತಾರೆ.   

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:  ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಮದ್ಯ ಮಾರಾಟ, ರೂ ೩,೮೦೦/- ಬೆಲೆಯ ಮದ್ಯ ವಶ, ಇಬ್ಬರ ಬಂಧನ:

March 28, 2009

ಗೌನಿಪಲ್ಲಿ ಪೊಲೀಸ್ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ನಾರಾಯಣಸ್ವಾಮಿ, ಜಿ.ಸಿ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಶ್ರೀನಿವಾಸಪುರ ತಾಲೂಕು ಕೋಡಿಪಲ್ಲಿ ಗ್ರಾಮ ಮಂಜುಳಮ್ಮ ಎಂಬುವರ ಮನೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿದ್ದ ರೂ. ೩,೮೦೦/- ಬೆಲೆ ಬಾಳುವ ೪೮ ಬಾಟಲ್ ಹೈವಾರ್ಡ್ ವಿಸ್ಕಿ ಮತ್ತು ೪೮ ಬಾಟಲ್ ರಾಜಾ ವಿಸ್ಕಿಯನ್ನು ವಶ ಪಡಿಸಿಕೊಂಡು ಮಂಜುಳಮ್ಮ ಮತ್ತು ರಂಗನಾಥ ಎಂಬುವರನ್ನು ಬಂದಿಸಿ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತಾರೆ. ಈ ಬಗ್ಗೆ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬ್ಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂದಿತರ ವಿವರಗಳು.

೧. ರಂಗನಾಥ ಬಿನ್ ಬಾಲರಾಜ್, ಎಸ್.ರಾಗುಟ್ಟಹಳ್ಳಿ, ಚಿಂತಾಮಣಿ ತಾಲೂಕು

೨. ಮಂಜುಳಮ್ಮ ಕೋಂ ಕಿಟ್ಟನ್ನ, ಕೊಡಿಪಲ್ಲಿ, ಶ್ರೀನಿವಾಸಪುರ ತಾಲೂಕು.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಮಾರ್ಚ್ ೨೦೦೯

March 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೩-೨೦೦೯ ರಂದು ೦೭೧೫ ಗಂಟೆ ಸಮಯದಲ್ಲಿ ಮಾಲೂರು ಪುರದ ವಾಸಿ ಟಿ.ರಾಧಾಕೃಷ್ಣ ಎಂಬುವರು ಮಾಲೂರು ತಾಲೂಕು ಜಗದೇನಹಳ್ಳಿ ಗ್ರಾಮದ ವಾಸಿ ಸುಬ್ರಮಣಿ ರವರು ಚಾಲನೆ ಮಾಡುತ್ತಿದ್ದ ಟಿ.ವಿ.ಎಸ್ ವಿಕ್ಟರ್‍ಸಂಖ್ಯೆ ಟಿಎನ್-೨೪-ಜಡ್-೮೦೨೨ ದ್ವಿಚಕ್ರವಾಹನದಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದರು.  ಆ ಸಮಯದಲ್ಲಿ ಸುಬ್ರಮಣಿ ರವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಸೀತನಾಯಕನಹಳ್ಳಿ ಗೇಟ್ ಬಳಿ ವಾಹನದ ಸಮೇತ ಕೆಳಗೆ ಬಿದ್ದಿರುತ್ತಾರೆ. ಇದರ ಪರಿಣಾಮ ದ್ವಿಚಕ್ರವಾನದಲ್ಲಿದ್ದ ಇಬ್ಬರಿಗೂ ಗಾಯಗಳುಂಟಾಗಿರುತ್ತದೆ.  

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೩-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಶೆಟ್ಟಿಕೊತ್ತನೂರು ಗ್ರಾಮದ ವಾಸಿ ಎಸ್.ರಾಮಚಂದ್ರಯ್ಯ  ಎಂಬುವರು ತಮ್ಮ ಬಜಾಜ್ ಸ್ಕೂಟರ್‍ ಸಂಖ್ಯೆ ಸಿಎವೈ-೯೬೪೧ ದ್ವಿಚಕ್ರವಾಹನದಲ್ಲಿ ಕುಂಬಾರಹಳ್ಳಿಯಿಂದ ಕೋಲಾರಕ್ಕೆ ಬರುವ ಸಲುವಾಗಿ ಎನ್,ಹೆಚ್ ೪ ರಸ್ತೆಯ ಆರ್‍.ಎಲ್.ಜಾಲಪ್ಪ ಗೆಸ್ಟ್ ಹೌಸ್ ಮುಂಭಾಗ ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆಎ-೦೧-ಎಫ್-೮೪೦೩ ಕೆ.ಎಸ್.ಆರ್‍.ಟಿ.ಸ್ ಬಸ್ ರ ಚಾಲಕ ವೆಂಕಟೇಶಮೂರ್ತಿ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ದ್ವಿಚಕ್ರವಾನದಲ್ಲಿದ್ದ ಎಸ್.ರಾಮಚಂದ್ರಯ್ಯ ರವರಿಗೆ ಗಾಯಗಳುಂಟಾಗಿರುತ್ತದೆ.  

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲು ಹುಡುಗಿ ಕಾಣೆಯಾಗಿರುವುದರ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಪಾತಮುತ್ತಕಪಲ್ಲಿ ಗ್ರಾಮದ ವಾಸಿ ರಾಮಸಂದ್ರಂ ರೆಡ್ಡಪ್ಪ ಎಂಬುವರ ೧೬ ವರ್ಷದ ಮಗಳಾದ ರಮ್ಯ ಎಂಬುವರು ಕಾಣೆಯಾದವರು. ದಿನಾಂಕ ೨೪-೦೩-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ತನ್ನ ಮನೆಯಿಂದ ಹೊರ ರಮ್ಯ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ. ಈ ಬಗ್ಗೆ ಕಾಣೆಯಾದ ಹುಡುಗಿಯ ತಂದೆ ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:  ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಮಾರ್ಚ್ ೨೦೦೯

March 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ:  ಇಲ್ಲ

-ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೩-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಚಲ್ದಿಗಾನಹಳ್ಳಿ ಗ್ರಾಮದ ವಾಸಿ ಗಂಗಾಧರ ಎಂಬುವರು ಕೆಎ-೦೭-ಎಂ-೨೮೨೮ ಟೆಯೋಟಾ ಕಾರ್‍ ವಾಹನದಲ್ಲಿ ತಮ್ಮ ಗ್ರಾಮದ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ವಾಹನವನ್ನು ಚಾಲನೆ ಮಾಡುತ್ತಿದ್ದ ಅಡ್ಡಗಲ್ ಗ್ರಾಮದ ವಾಸಿ ಮುಜಾಮುಲ್ಲಾ ಪಾಷ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಕಾರ್‍ ರಸ್ತೆ ಬದಿಯ ಹಳ್ಳವೊಂದಕ್ಕೆ ಉರುಳಿ ಬಿದ್ದಿರುತ್ತದೆ. ಇದರ ಪರಿಣಾಮ ಕಾರಿನಲ್ಲಿದ್ದ ಗಂಗಾಧರ ರವರಿಗೆ ಗಾಯಗಳಾಗಿದ್ದು ಕಾರ್‍ ಜಖಂಗೊಂಡಿರುತ್ತದೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೩-೨೦೦೯ ರಂದು ೧೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕುಡುವನಹಳ್ಳಿ ಗ್ರಾಮದ ವಾಸಿ ಕುಮಾರಿ ವೆಂಕಟರತ್ನ (೧೮) ಎಂಬುವರು ಕೋಲಾರ ನಗರ ಬೃಂದಾವನ ವೃತ್ತದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ರಸ್ತೆ  ಕಡೆಯಿಂದ ಬಂದ ದ್ವಿಚಕ್ರವಾಹನ ಸಂಖ್ಯೆ ಕೆಎ-೦೭-ಕೆ-೩೭೪೭ ರ ಚಾಲಕ ತನ್ನ ದ್ವಿಚಕ್ರವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟರತ್ನ ರವರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಹೊರಟುಹೋಗಿರುತ್ತಾನೆ. ಇದರ ಪರಿಣಾಮ ವೆಂಕಟರತ್ನ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ   

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಪಾತಬಲ್ಲಪಲ್ಲಿ ಗ್ರಾಮದ ವಾಸಿ ನರಸಿಂಹಪ್ಪ ಎಂಬುವರ ೧೦ ವರ್ಷದ ಮಗ ವಿನೋದ್ ಕುಮಾರ್‍ ಎಂಬುವರು ಮೃತಪಟ್ಟವರು. ವಿನೋದ್ ಕುಮಾರ್‍ ದಿನಾಂಕ ೨೬-೦೩-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಯಾವುದೋ ಒಂದು ವಿಷ ಸರ್ಪ ಕಚ್ಚಿರುತ್ತದೆ.  ಇದರ ಪರಿಣಾಮ ಅಸ್ವಸ್ಥರಾದ ವಿನೋದ್ ಕುಮಾರ್‍ ರವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುತ್ತಾನೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:  ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.