ದಿನದ ಅಪರಾಧಗಳ ಪಕ್ಷಿನೋಟ ೩೧ ನೇ ಮೇ ೨೦೦೯

May 31, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಚಉಕ್ಕಪದ್ಮಘಟ್ಟ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೫-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಪದ್ಮನಾಭಘಟ್ಟ ಗ್ರಾಮದ ವಾಸಿ ವಿಶ್ವನಾಥ ಮತ್ತು  ಇವರ ತಮ್ಮ ಪ್ರಕಾಶ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ವೆಂಕಟರಾಮಯ್ಯ ಮತ್ತಿತರೇ ಮೂವರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಹಲ್ಲೆ: ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಕೆ.ಇ.ಬಿ ವೃತ್ತದ ಬಳಿ ಕೃತ್ಯ ಸಂಭವಿಸಿರುತ್ತದೆ. ಖಾಸಗಿ ಬಸ್ಸಿನ ಕಂಡಕ್ಟರ್‍ ರಾಜಣ್ಣ ಎಂಬುವರ ಮೇಲೆ ಜಗಳ ತೆಗೆದ ಕೆ.ಎಸ್.ಆರ್‍.ಟಿ.ಸಿ ಬಸ್ ಕಂಡಕ್ಟರ್‍ ನಂದಕುಮಾರ್‍ ಎಂಬುವರು ಕೈಗಳಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಬಸ್ಸಿಗೆ ಜನರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.ಈ ಬಗ್ಗೆ ಇಬ್ಬರೂ ಜಗಳವಾಡಿ ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮಾರೇನಹಳ್ಳಿ ಕ್ರಾಸ್ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೫-೨೦೦೯ ರಂದು ೧೫೨೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಟೌನ್ ವಾಸಿಗಳಾದ ರಾಜಾರಾಂ ಮತ್ತಿವರ ಮಗ ರವಿ ಎಂಬುವರ ಮೇಲೆ ಜಗಳ ತೆಗೆದ ಕೋಲಾರ ತಾಲೂಕು ಹೋಳೂರು ಗ್ರಾಮದ ವಾಸಿಗಳಾದ ಲಕ್ಷ್ಮಿನಾರಾಯಣ ಪ್ರಭಾಕರ ಮತ್ತು ಹರಿ ಎಂಬುವರು ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಆಸ್ತಿವಿಚಾರವಾಗಿ ಪರಸ್ಪರರಿಗೆ ಇದ್ದ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ವೈಧ್ಯರ ನಿರ್ಲಕ್ಷತೆಯಿಂದ ಸಾವು ಸಂಬಂವಿಸಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೭-೦೪-೨೦೦೯ ರಂದು   ಬಂಗಾರುಪೇಟೆ ತಾಲೂಕು ಅತ್ತಿಗೆರೆ ಗ್ರಾಮದ ವಾಸಿ ಎಂ.ವಿ.ಮಂಜುನಾಥ ಎಂಬುವರು ಪತ್ನಿ ಶ್ರೀಮತಿ ಶಾರದ ಎಂಬುವರನ್ನು ಹೆರಿಗೆಗಾಗಿ ಕೋಲಾರ ಎಸ್‌.ಎನ್.ಆಸ್ಪತ್ರೆಗೆ ದಾಖಲಿಸಿದ್ದು, ವೈಧ್ಯಾಧಿಕಾರಿಯಾದ ಶ್ರೀಮತಿ ಸುಧಾಮಣಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿದ್ದು, ೧೫ ದಿನಗಳ ನಂತರ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆರ್‌.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದು. ಅಲ್ಲಿಯೂ ಸಹ ೨ ಬಾರಿ ಶಸ್ತ್ರ ಚಿಕಿತ್ಸೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೩೦-೦೫-೨೦೦೯ ಬೆಳಗಿನ ಜಾವ ಮೃತಪಟ್ಟಿದ್ದು ಇದಕ್ಕೆ ಎಸ್‌.ಎನ್‌.ಆರ್‍.ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿದ ವೈಧ್ಯಾಧಿಕಾರಿಯಾದ ಶ್ರೀಮತಿ ಸುಧಾಮಣಿ ರವರ ನಿರ್ಲಕ್ಷತನವೆ  ಕಾರಣವಾಗಿರುತ್ತದೆ ಎಂದು ಮಂಜುನಾಥ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಮೇ ೨೦೦೯

May 29, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೦-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೧೦

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೫-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಪೇಟೆಚಾಮನಹಳ್ಳಿ ವಾಸಿ ಶ್ರೀಧರ ಎಂಬುವರು ಹೊಟ್ಟೇನೋವು ತಾಳಲಾರದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ತೋಟಕ್ಕೆ ಸಿಂಪಡಿಸಲು ಇಟ್ಟಿದ್ದ ಕ್ರಿಮಿನಾಶಕವನ್ನು ಕುಡಿದು ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆರ್‌.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೩೦-೦೫-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  ೨೮

-ಸ್ಥಳ ದಂಡ ಮೊತ್ತ:  ರೂ. ೩,೪೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಗಾಂಜಾ ದಾಸ್ತಾನು: ಮೂರು ಜನ ಆರೋಪಿಗಳ ಬಂಧನ, ೧೧ ಕೆ.ಜಿ ಗಾಂಜಾ ವಶ.

May 29, 2009

ದಿನಾಂಕ ೨೯-೦೫-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಕೋಲಾರ ನಗರ ವೃತ್ತ ನಿರೀಕ್ಷಕರಾದ ಶ್ರೀ ರೇಣುಕಾ ಪ್ರಸಾದ್ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯವರೊಡನೆ ಕೋಲಾರ ಹುಸ್ಮಾನ್ ನಗರದ ವಾಸಿ ಗೋಹಾರ್‍ ಎಂಬುವರ ಮನೆಯ ಮೇಲೆ ದಾಳಿ ನಡೆಸಿರುತ್ತಾರೆ. ಕಾರ್ಯಾಚರಣೆ ವೇಳೆ ಆರೋಪಿಗಳಾದ ಬಹದ್ದೂರ್‍, ಸಲೀಂ ಹಾಗೂ ಮಧು ಎಂಬುವರನ್ನು ಬಂಧಿಸಲಾಗಿದ್ದು ಇವರ ಅಕ್ರಮವಾಗಿ ಶೇಖರಿಸಿಟ್ಟಿದ್ದ ೧೧ ಕೆ.ಜಿ. ಗಾಂಜವನ್ನು ಸಹಾ ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಬಗ್ಗೆ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಬಂಧಿತ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಮೇ ೨೦೦೯

May 28, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೫-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬಿ.ಹೊಸಹಳ್ಳಿ ಗ್ರಾಮದ ವಾಸಿ ರಾಜಣ್ಣ ಮತ್ತು ಸೀನಪ್ಪ ಎಂಬುವರು ತಮ್ಮ ಹೀರೋಹೋಂಡಾ ಸ್ಪ್ಲೆಂಡರ್‍ ಸಂಖ್ಯೆ ಕೆಎ-೦೭-ಕ್ಯೂ-೬೩೪೩ ದ್ವಿಚಕ್ರವಾಹನದಲ್ಲಿ ತಯ್ಲೂರಿಗೆ ಹೋಗುವ ಸಲುವಾಗಿ ತಾಯ್ಲೂರು-ಗಡ್ಡಂಚಿನ್ನೇಪಲ್ಲಿ ರಸ್ತೆಯ ಮಹಬೂಬ್ ಸಾಬಿರವರ ತೋಟದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ದ್ವಿಚಕ್ರವಾಹನವನ್ನು ಚಾಲನೆ ಮಾಡುತ್ತಿದ್ದ ರಾಜಣ್ಣ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಮೋರಿಯೊಂದಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಹಿಂಬದಿ ಕುಳಿತಿದ್ದ ಸೀನಪ್ಪ (೪೭) ರವರು ಕೆಳಗೆ ಬಿದ್ದು ತಲೆಗೆ ತೀವ್ರವಾದ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೫-೨೦೦೯ ರಂದು ೨೩೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಟೌನ್ ವಾಸಿ ಮೀನಾಕ್ಷಿ ಎಂಬುವರು ತಮ್ಮ ಅಕ್ಕನ ಮಗನಾದ ರವಿಕುಮಾರ್‍ ಎಂಬುರೊಡನೆ ಎಪಿ-೧೬-ಎನ್-೬೩೨೧ ಸಂಖ್ಯೆಯ ಯಮಹಾ ದ್ವಿಚಕ್ರವಾಹನದಲ್ಲಿ ಕುಳಿತುಕೊಂಡು ಎನ್.ಹೆಚ್ ೪ ರಸ್ತೆಯ ಹರ್ಷ ಬಾರ್‍ ಮುಂಭಾಗ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಲಾರಿ ಸಂಖ್ಯೆ ಕೆಎ-೦೫-ಡಿ-೨೦೧೧ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರ ರವಿಕುಮಾರ್‍ ರವರಿಗೆ ತೀವ್ರವಾದ ಗಾಯಗಳುಂಟಾಗಿದ್ದು ಪ್ರಸ್ತುತ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ.  

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ ೩೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಮೇ ೨೦೦೯

May 28, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೫-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ವಾಸಿ ಅಶ್ವತ್ಥ ಎಂಬುವರು ತಾವು ಚಾಲನೆ ಮಾಡುತ್ತಿದ್ದ ಟೆಂಪೋ ಸಂಖ್ಯೆ ಡಬ್ಲ್ಯೂ.ಪಿ-೪೧-ಬಿ-೭೫೮೦ ಕೆಟ್ಟುಹೋದ ಪರಿಣಾಮ ರಿಪೇರಿ ಮಾಡುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ನರಸಾಪುರ ಹೋಬಳಿ ಕಾಮತ್ ಹೋಟೆಲ್ ಬಳಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ಬಂದ ಎ.ಪಿ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಎಪಿ-೨೮-ಜಡ್-೩೨೪೫ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರಿಪೇರಿ ಮಾಡುತ್ತಿದ್ದ ಟೆಂಪೋ ವಾಹನ ಚಕ್ರ ಅಶ್ವತ್ಥ ರವರ ಮೇಲೆ ಹರಿದು ಅಶ್ವತ್ಥ ರವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು ದಾಖಲಾಗಿರುತ್ತದೆ. ಮಾಲೂರು ತಾಲೂಕು ಬಿಂಗೀಪುರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೭-೦೩-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಬಿಂಗೀಪುರ ಗ್ರಾಮದ ವಾಸಿ ಈರಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಗೋಪಾಲ ಮತ್ತು ಮಮತಾ ಎಂಬುವರು ಕೈಗಳಿಂದ ಮತ್ತು ರಾಡಿನಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿದ್ದು  ಈ ಬಗ್ಗೆ ಎರಡೂ ಕಡೆಯವರು ಪರಸ್ಪರ ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಇತರೆ: ಇಲ್ಲ 

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಮಾದವ ಗುರ್ಜೇನಹಳ್ಳಿ ಗ್ರಾಮದ ವಾಸಿ ಲಕ್ಷ್ಮಮ್ಮ ಮೃತರು. ದಿನಾಂಕ ೨೭-೦೫-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ತನ್ನ ಮನೆಯ ದೂಲಕ್ಕೆ ನೇಣು ಹಾಕಿಕೊಂಡು ಲಕ್ಷ್ಮಮ್ಮ ರವರು ಅಸುನಿಗಿರುತ್ತಾರೆ. ಮನೆಯಲ್ಲಿ ಹಣಕಾಸಿನ ವಿಚಾರವಾಗಿ ಇದ್ದ ವಿವಾದದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಿಕೊಂಡಿರುವುದಾಗಿ ತಿಳಿದುಬಂದಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಮೇ ೨೦೦೯

May 27, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೫-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಮುದ್ಧೇಪಲ್ಲಿ ಗ್ರಾಮದ ವಾಸಿ ಎಂ.ಎಸ್.ವೆಂಕಟರಮಣ ಎಂಬುವರು ತಮ್ಮ ಬಜಾಜ್ ಸಿ.ಟಿ ೧೦೦ ಸಂಖ್ಯೆ ಎಪಿ-೦೩-ಕ್ಯೂ-೪೫೭೮ ದ್ವಿಚಕ್ರವಾಹನದಲ್ಲಿ ಚಿಂತಾಮಣಿ ತಾಲೂಕು ಅಮಿಟಿಪಲ್ಲಿ ಗ್ರಾಮದ ವಾಸಿಗಳಾದ ವಿಜಯ್ ಮತ್ತು ಶಿವಕುಮಾರ್‍ ಎಂಬುವರನ್ನು ಕುಳ್ಳರಿಸಿಕೊಂಡು ಶ್ರೀನಿವಾಸಪುರ ತಾಲೂಕು ಕಲ್ಲಂಗಡಿ ಕ್ರಾಸ್ ಬಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೮೩೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ  ದ್ವಿಚಕ್ರವಾಹನ ಚಾಲಕ ಎಂ.ಎಸ್.ವೆಂಕಟರಮಣ ರವರಿಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಇನ್ನಿತರ ಸವಾರರಿಗೂ ಸಹಾ ಗಾಯಗಳುಂಟಾಗಿರುತ್ತದೆ.

-ಸಾಧಾರಣ: ೦೨

ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೫-೨೦೦೯ ರಂದು ೧೩೪೫ ಗಂಟೆ ಸಮಯದಲ್ಲಿ ಶ್ರೀನಿವಾಸಮೂರ್ತಿ ಎಂಬುವರು ತನ್ನ ಹ್ಯುಂಡೈ ಸಾಂಟ್ರೋ ಕಾರ್‍ ಸಂಖ್ಯೆ ಕೆಎ-೩೫-೧೦೬೬ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಶ್ರೀನಿವಾಸಪು ತಾಲೂಕು ಮಂಡ್ಯಾಳ ಕ್ರಾಸ್ ಬಳಿ ರಸ್ತೆ ಬದಿಯ ಆಲದಮರವೊಂದಕ್ಕೆ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಶ್ರೀನಿವಾಮೂರ್ತಿ ರವರಿಗೆ ಗಾಯಗಳುಂಟಾಗಿರುತ್ತದೆ.  

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೫-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೈರಸಂದ್ರ ಗ್ರಾಮದ ವಾಸಿ ಉತ್ತನಲ್ಲಪ್ಪ ಎಂಬುವರು ತಮ್ಮ ಕೆಎ-೦೭-ಎಲ್-೯೩೭೭ ದ್ವಿಚಕ್ರವಾಹನವನ್ನು ಎನ್.ಹೆಚ್ ೪ ರಸ್ತೆಯ ಚಾಕಾರಸನಹಳ್ಳಿ ಗೇಟ್ ಬಳಿ ನಿಲ್ಲಿಸಿಕೊಂಡು ನಿಂತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆಎ-೧೮-೧೮೦೩ ಲಾರಿಯ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಜಖಂಗೊಂಡು ಉತ್ತನಲ್ಲಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೫-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲ್ಲೂಕು ಪಾತಕೋಟೆ ಗ್ರಾಮದ ವಾಸಿ ವೆಂಕಟೇಶ್ ಎಂಬುವರು ಬಸ್ಸಿನಲ್ಲಿ ಸೋಮಯಾಜಲಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದಾದ ದಾಸರತಿಮ್ಮನಹಳ್ಳಿ ಗ್ರಾಮದ ಬಳಿ ಅದೇ ಗ್ರಾಮದ ವಾಸಿಗಳಾದ ಸೀನಪ್ಪ ಮತ್ತು ಇತರೆ ೬ ಜನರು ಹಳೇ ದ್ವೇಷದ ಹಿನ್ನಲೆಯಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಬಂದು ವೆಂಕಟೇಶ್ ರವರನ್ನು ಬಸ್ಸಿನಿಂದ ಕೆಳಕ್ಕೆ ಇಳಿಸಿ ಕಂಬಕ್ಕೆ ಕಟ್ಟಿ ಹೊಡೆದಿರುತ್ತಾರೆ.

ಹಲ್ಲೆ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೫-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲ್ಲೂಕು ಆಲವಾಟ  ಗ್ರಾಮದ ವಾಸಿ ನಾಗರಾಜ  ಎಂಬುವರು ಅದೇ ಗ್ರಾಮದ ವಾಸಿ ವೆಂಕಟರಾಮರೆಡ್ಡಿ ರವರ ತೋಟಕ್ಕೆ ಹುಲ್ಲಿಗಾಗಿ ಹೋಗಿದ್ದ್ರು.  ಅ ಸಮಯದಲ್ಲಿ ವೆಂಕಟರಾಮರೆಡ್ಡಿ ಮತ್ತು ಇತರೆ ೩ ಜನರು ಸೇರಿಕೊಂಡು  ಮಾವಿನ ತೋಪಿನಲ್ಲಿ ಕಾಯಿಗಳು ಕಳ್ಳತನ ಮಾಡಲು ಬಂದಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುತ್ತಾರೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ  ಸಂಬಂಧಿಸಿದಂತೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೫-೦೫-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲ್ಲೂಕು ಯದರೂರು  ಗ್ರಾಮದ ವಾಸಿ ಮಂಜುನಾಥ  ಮತ್ತು ಅದೇ ಗ್ರಾಮದ ವಾಸಿಯಾದ ವೆಂಕಟೇಶಪ್ಪ  ಎಂಬುವರು ಆಟವಾಡುವ ವಿಚಾರದಲ್ಲಿ ಜಗಳ ಮಾಡಿಕೊಂಡು ವೆಂಕಟೇಶಪ್ಪ ಮಂಜುನಾಥನಿಗೆ ಹೊಡೆದು ಗಾಯಪಡಿಸಿರುತ್ತಾನೆ.

ಇತರೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಜಮೀನು ವಿಚಾರದಲ್ಲಿ ಮನೆಗೆ ಬೆಂಕಿ ಹಚ್ಚಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೬-೦೯-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲುಕು ಶೀನಗೇನಹಳ್ಳಿ ಗ್ರಾಮದ ವಾಸಿಯಾದ ಎ.ಕೆ.ಮುನಿಯಪ್ಪ ಎಂಬುವರು ತಮ್ಮ ಮನೆಯ ಬಳಿ ಇದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾ ನಾಗಮಣಿ ಮತ್ತು ಇತರೆ ೩ ಜನರು ಜಮೀನು ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಮನೆಗೆ ಬೆಂಕಿ ಇಟ್ಟು ಪ್ರಾಣ ಬೆದರಿಕೆ ಹಾಕಿರುತ್ತಾರೆ.  

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಕಾಯಿದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೫-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲೂಕು ಶೀನಗೆನಹಳ್ಳಿ ಗ್ರಾಮದ ವಾಸಿಯಾದ ನಾರಾಯಣಸ್ವಾಮಿ ರವರು ತಮ್ಮ ಮನೆಯ ಬಳಿ ಇದ್ದರು.  ಅ ಸಮಯದಲ್ಲಿ ಬಂದ ಅದೇ ಗ್ರಾಮದ ವಾಸಿಗಳಾದ ಲಿಂಗಾರೆಡ್ಡಿ    ಮತ್ತು ಇತರೆ ೩ ಜನರು ಜಮೀನು ವಿಚಾರದಲ್ಲಿ ಜಗಳ ಮಾಡಿ ಕೈಗಳಿಂದ ಹೊಡೆದು ಜಾತಿನಿಂದನೆ ಮಾಡಿರುತ್ತಾರೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಮೇ ೨೦೦೯

May 26, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಮುಳಬಾಗಿಲು ಟೌನ್ ಮುಜಾವರ್‍ ಮೊಹಲ್ಲಾದ ವಾಸಿ ಜಮೀರಾ ಪರ್ವಿನ್ (೩೦) ಎಂಬುವರು ನೀಡಿದ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ಜಮೀರಾ ಪರ್ವಿನ್ ರವರು ದಿನಾಂಕ ೧೫-೦೫-೨೦೦೫ ರಂದು ಮುಳಬಾಗಿಲು ವಾಸಿ ಫೈರೋಜ್ ಖಾನ್ ಎಂಬುವರೊಡನೆ ವಿವಾಗವಾಗಿರುತ್ತಾರೆ. ವಿವಾಗವಾದಾಗಿನಿಂದ ಇವರ ಗಂಡ ಫೈರೋಜ್ ಖಾನ್ ಹಾಗೂ ಗಂಡನ ಮನೆಯ ಕಡೆಯವರು ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯ ಮಾಡುತ್ತಿದ್ದು ದಿನಾಂಕ ೦೮-೦೫-೨೦೦೯ ರಂದು ೧೩೦೦ ಗಂಟೆ ಸಮಯದಲ್ಲಿ ಜಮೀರಾ ಪರ್ವಿನ್ ರವರನ್ನು ಅವರ ಗಂಡ ಫೈರೋಜ್ ಖಾನ್ ವೇಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲು ಯತ್ನಿಸಿರುವುದಾಗಿ ಜಮೀರಾ ಪರ್ವಿನ್ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೫-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಎನ್.ಹೆಚ್ ೪ ರಸ್ತೆಯ ಲಕ್ಷ್ಮಿಸಾಗರ ಗೇಟ್ ಬಳಿ ಆಂದ್ರ ಹೋಟೆಲ್ ನಡೆಸುತ್ತಿರುವ ಸುಧೀರ್‍ ಎಂಬುವರು ತಮ್ಮ ಜಿಪ್ಸಿ ಸಂಖ್ಯೆ ಕೆಎ-೨೧-ಎಂ-೧೩೨೮ ವಾಹನದಲ್ಲಿ ಎನ್.ಹೆಚ್ ೪ ರಸ್ತೆಯ ಕೋಲ್ ಮನ್ ಫ್ಯಾಕ್ಟರಿ ಮುಂಭಾಗ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆಎ-೨೯-೬೩೦೩ ಸಂಖ್ಯೆಯ ಖಾಸಗಿ ಬಸ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಜಿಪ್ಸಿ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ವಾಹನ ಜಂಖಂಗೊಂಡು ಅದರಲ್ಲಿದ್ದ ಸುಧೀರ್‍ ರವರಿಗೆ ಗಾಯಗಳುಂಟಾಗಿರುತ್ತದೆ. ಗಾಯಾಳು ಪ್ರಸ್ತುತ ಕೋಲಾರ್‍ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಆರೋಪಿ ತನ್ನ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿರುತ್ತಾನೆ.  

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೫-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ನಲ್ಲೂರು ಗ್ರಾಮದ ವಾಸಿ ಮಾರ್ಕೊಂಡಯ್ಯ (೪೨) ಎಂಬುವರು ಕೋಲಾರ-ಮುಳಬಾಗಿಲು ಎನ್.ಹೆಚ್ ೪ ರಸ್ತೆಯ ತಂಬಿಹಳ್ಳಿ ಗೇಟ್ ಬಳಿ ನಿಂತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಕೆಎ-೦೭-ಕ್ಯೂ-೭೭೮೪ ಹೀರೋಹೋಂಡಾ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಮಾರ್ಕೊಂಡಯ್ಯ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ    

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ನಗರ ಪಟಾಲಪ್ಪ ಬಡಾವಣೆಯ ವಾಸಿ ಬಸಮ್ಮ ಎಂಬುವರು ಕಾಣೆಯಾಗಿರುತ್ತಾರೆ. ದಿನಾಂಕ ೨೬-೦೩-೨೦೦೯ ರಂದು ರಾತ್ರಿ ತನ್ನ ಮನೆಯಿಂದ ಹೊರಟ ಬಸಮ್ಮ ರವರು ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಮೇ ೨೦೦೯

May 24, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧ 

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೫-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಶೆಟ್ಟಿಗಾನಹಳ್ಳಿ ಗ್ರಾಮದ ವಾಸಿ ಶಶಿಕುಮಾರ  ಎಂಬುವರು ಮಂಜುನಾಥ ಎಂಬುವರ ಜೊತೆಯಲ್ಲಿ ತನ್ನ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕ್ಯೂ-೭೨೬೭ ರಲ್ಲಿ ವೇಮಗಲ್ – ಕೈವಾರ  ರಸ್ತೆಯ ವೀರಾಪುರ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ  ದ್ವಿಚಕ್ರ ವಾಹನದ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ ದ್ವಿಚಕ್ರವಾಹನದ ಹಿಂಬದಿಯಲ್ಲಿದ್ದ ಮಂಜುನಾಥ ರವರ ತಲೆಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೫-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ ಜಗಜೀವನಪಾಳ್ಯದ ವಾಸಿ ಕೆಂಚಪ್ಪ ಎಂಬುವರು ವೆಂಕಟೇಶ ಎಂಬುವರ ಜೊತೆಯಲ್ಲಿ ತನ್ನ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೧-ವಿ-೯೨೯೨ ರಲ್ಲಿ ಶ್ರೀನಿವಾಸಪುರ – ಹೊಗಳಗೆರೆ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಅಪರಿಚಿತ ಟ್ರಾಕ್ಟರ್‍ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಇಬ್ಬರಿಗೂ ಗಾಯಗಳಾಗಿರುತ್ತದೆ.   

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೪-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಮಾಲೂರು ಪಟ್ಟಣದ ಆದರ್ಶನಗರದ ವಾಸಿ ಶ್ರೀಮತಿ ಮುನಿರತ್ನಮ್ಮ ಎಂಬುವರು ಮಾಲೂರು ಪಟ್ಟಣದ ಮುರುಗರ ದೇವಾಸ್ಥಾನದ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ  ಸಂಖ್ಯೆ ಕೆಎ-೦೮-ಜೆ-೬೫೨೧ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಮುನಿರತ್ನಮ್ಮ ರವರಿಗೆ ಗಾಯಗಳಾಗಿರುತ್ತದೆ.   

 

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೦೫-೨೦೦೯ ರಂದು ೦೮೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಇರಗಸಂದ್ರ ಗ್ರಾಮದ ವಾಸಿ ಚಲಪತಿ ಮತ್ತು ಅವರ ಮನೆಯವರು ತಮ್ಮ ಖಾಲಿ ನಿವೇಶನದಲ್ಲಿ ಕಲ್ಲು ಚಪ್ಪಡಿಗಳನ್ನು ನಾಟುತ್ತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಎನ್ ವೆಂಕಟಾಚಲಪತಿ ಮತ್ತು ಇತರೆ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಅವಾಚ್ಚಶಬ್ದಗಳಿಂದ ಬೈದು ಕಲ್ಲುಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ    

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೫

-ಸ್ಥಳ ದಂಡ ಮೊತ್ತ: ರೂ ೭೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಮೇ ೨೦೦೯

May 23, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ  

-ಸಾಧಾರಣ: ಇಲ್ಲ  

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೦-೦೫-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಹೊಗರಿಗೊಲ್ಲಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಚಂದ್ರಪ್ಪ, ವೀರಭದ್ರಪ್ಪ, ಶಿವಮ್ಮ, ಸದಾಶಿವಯ್ಯ, ನ್ಯಾನಮ್ಮ, ನಂಜಮ್ಮ ಮತ್ತು ಶಿವಕುಮಾರ್‍ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕಾಲುಗಳಿಂದ ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುವುದಾಗಿ ತಿಳಿದು ಬಂದಿರುತ್ತದೆ.

ಹಲ್ಲೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಪುಲಿಓಬಿರೆಡ್ಡಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೪-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಪುಲಿಓಬಿರೆಡ್ಡಿ ಗ್ರಾಮದ ವಾಸಿ ಸುಬ್ಬಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಅನಿತಮ್ಮ ಮತ್ತು ಕೃಷ್ಣಾರೆಡ್ಡಿ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಆರೋಪಿಗಳು ಸುಬ್ಬಮ್ಮರವರಿಗೆ ಸೇರಿದ ಹತ್ತಿಯ ಗಿಡದಲ್ಲಿ ಹತ್ತಿಯನ್ನು ಕಿತ್ತಿದ್ದು ಈ ಹಿನ್ನಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.  

ಇತರೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಪ್ರಾಣಬೆದರಿಕೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೫-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ನಂಗಲಿ ಗ್ರಾಮದ ವಾಸಿ ಷಫೀವುಲ್ಲಾ ಎಂಬುವರನ್ನು ಅದೇ ಗ್ರಾಮದ ವಾಸಿ ತಸ್ಲೂ ಎಂಬುವರು ಅಪಹರಣ ಮಾಡಿರುವುದಾಗಿ ಹಾಗೂ ಈ ಬಗ್ಗೆ ಕೇಳಿದ್ದಕ್ಕೆ ತನಗೆ ಪ್ರಾಣಬೆದರಿಕೆ ಒಡ್ಡಿರುವುದಾಗಿ ಷಫೀವುಲ್ಲಾ ರವರ ಹೆಂಡತಿ ರೇಷ್ಮಾರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.    

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ಟೌನ್ ಕೆ.ಇ.ಬಿ ಬಳಿ ವಾಸವಾಗಿರುವ ಎನ್.ಶ್ರೀನಿವಾಸಯ್ಯ ಎಂಬುವರ ಮಗಳಾದ ಎಸ್.ಜಲಜಾಕ್ಷಿ ಎಂಬ ಹುಡುಗಿ ಕಾಣೆಯಾದವಳು. ದಿನಾಂಕ ೨೧-೦೫-೨೦೦೯ ರಂದು ತನ್ನ ಮನೆಯಿಂದ ಹೊರಟ ಎಸ್.ಜಲಜಾಕ್ಷಿ ಹಿಂತಿರುಗಿ ಬಾರದೇ ಕಾಣೆಯಾಗಿರುವುದಾಗಿ ಇವರ ತಂದೆ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಮಾಸ್ತೇನಹಳ್ಳಿ ಗ್ರಾಮದ ವಾಸಿ ಎಂ.ಎನ್.ಮಲ್ಲಿಕಾ ಎಂಬುವರು ಕಾಣೆಯಾದವರು. ದಿನಾಂಕ ೧೫-೦೫-೨೦೦೯ ರಂದು ತನ್ನ ಮನೆಯಿಂದ ಹೊರಟ ಮಲ್ಲಿಕಾ ರವರು ಹಿಂತಿರುಗಿ ಬಾರದೇ ಕಾಣೆಯಾಗಿರುವುದಾಗಿ ಇವರ ತಂದೆ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹೆಂಗಸು ಮತ್ತು ಮಗು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ತಾಯಲೂರು ಗ್ರಾಮದಲ್ಲಿ ವಾಸವಾಗಿರುವ ಎನ್.ಎಸ್.ಶ್ರೀನಿವಾಸ ಎಂಬುವರ ಪತ್ನಿ ಹೇಮವಾಣಿ ಮತ್ತು ಕಾರ್ತಿಕ್(೯)  ಎಂಬುವರು ಕಾಣೆಯಾದವರು. ದಿನಾಂಕ ೨೪-೦೫-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ತನ್ನ ಮನೆಯಿಂದ ಮಗುವಿನೊಂದಿಗೆ ಹೊರಟ ಹೇಮಾವಾಣಿ ಹಿಂತಿರುಗಿ ಬಾರದೇ ಕಾಣೆಯಾಗಿರುವುದಾಗಿ ಶ್ರೀನಿವಾಸ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಮೇ ೨೦೦೯

May 22, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೩-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ   

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ  

ಮನೆಗಳ್ಳತನ: ೦೧

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೫-೨೦೦೯ ರಂದು ರಾತ್ರಿ ಯಾರೋ ಕಳ್ಳರು ಶ್ರೀನಿವಾಸಪುರ ತಾಲೂಕು ರಾಯಲ್ಪಾಡ್ ಗ್ರಾಮದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ ೬ ಅಡಿಗೆ ಅನಿಲದ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಅಡಿಗೆ ಅನಿಲದ ಸಿಲಿಂಡರ್‍ ಬೆಲೆ ರೂ . ೧೨,೦೦೦/- ಗಳಾಗಿರುತ್ತದೆ. ಈ ಬಗ್ಗೆ ಶ್ರೀ. ವೆಂಕಟರವಣಪ್ಪ, ಮುಖ್ಯೋಪಾದ್ಯಾಯರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ. ರಾಯಲ್ಪಾಡ್ ರವರು ದೂರುನ್ನು ದಾಖಲಿಸಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ:  ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೫-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಚಿಂತಾಮಣಿ- ಹೆಚ್-ಕ್ರಾಸ್   ರಸ್ತೆಯ ಉರಟಿ ಅಗ್ರಹಾರ ಗೇಟ್ ಬಳಿ ಕೆಎ-೦೩-ಬಿ-೬೯೩೬ರ  ಆಟೋ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮುಂದೆ ಹೋಗುತ್ತಿದ್ದ  ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ  ಆಟೋನಲ್ಲಿದ್ದ ಒಬ್ಬ ಅಪರಿಚಿತ ಗಂಡಸಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಸಾಗಿಸುವ ಮಾರ್ಗ ಮದ್ಯ ಮೃತಪಟ್ಟಿರುತ್ತಾನೆ.  

-ಸಾಧಾರಣ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೫-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ನರಸಾಪುರ ಗ್ರಾಮದ ವಾಸಿ ಕೃಷ್ಣಪ್ಪ ಮತ್ತು ಆತನ ಸ್ನೇಹಿತ ರಘು ಎಂಬುವರು ಕೋಲಾರ-ನರಸಾಪುರ ಎನ್.ಹೆಚ್ ೪ ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ಸೈಕಲ್‌ನಲ್ಲಿ ನರಸಾಪುರಕ್ಕೆ ಬರುತ್ತಿದ್ದರು. ಆ ಸಮಯದಲ್ಲಿ ಎದುರಿನಿಂದ ಬಂದ ಕೆಎ-೦೭-೮೧೧೩ ಟಾಟಾ ಎಸಿ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಡಿಕ್ಕಿ ಹೊಡೆಸಿದ ಪರಿಣಾಮ ಇಬ್ಬರಿಗೂ ಗಾಯಗಳುಂಟಾಗಿರುತ್ತದೆ. ಚಿಕಿತ್ಸೆಗಾಗಿ ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಗೆ ದಾಖಲಾಗಿರುತ್ತದೆ.  

ಮೋಸ / ವಂಚನೆ ಪ್ರಕರಣಗಳು: ಇಲ್ಲ  

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಕೋಲಾರ ನಗರ ಠಾಣೆಯಲ್ಲಿ ವೈಧ್ಯರ ನಿರ್ಲಕ್ಷ್ಯದಿಂದ ಸಾವು ಸಂಬಂವಿಸಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೧-೦೫-೨೦೦೯ ರಂದು ಕೋಲಾರ ತಾಲೂಕು ನುಕ್ಕನಹಳ್ಳಿ ಗ್ರಾಮದ ವಾಸಿ ಆರ್‍.ಅಶ್ವಥನಾರಾಯಣ ಎಂಬುವರ ತಂದೆ ರಾಮಚಂದ್ರಪ್ಪ ರವರಿಗೆ ಸುಸ್ತು ಇದ್ದ ಕಾರಣ ಕೋಲಾರ ನ್ಯೂ ಕಾಮಧೇನು ನರ್ಸಿಂಗ್ ಹೋಂ ಗೆ ದಾಖಲಿಸಿದ್ದರು. ವೈಧ್ಯರು ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷತೆ ತೋರಿಸಿದ್ದರಿಂದ ರಾಮಚಂದ್ರಪ್ಪ ರವರು ಮೃತಪಟ್ಟಿರುತ್ತಾರೆ.   

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೫

-ಸ್ಥಳ ದಂಡ ಮೊತ್ತ: ರೂ. ೧೮೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.