ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಅರಬಿಕೊತ್ತನೂರು ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೦೭-೨೦೦೯ ರಂದು ರಾತ್ರಿ ಅರಬಿಕೊತ್ತನೂರು ಗ್ರಾಮದ ಬಳಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಬೆಸ್ಕಾಂ ಇಲಾಖೆಗೆ ಸೇರಿದ ೨೨೦೦ ಮೀಟರ್ ವಿದ್ಯುತ್ ತಂತಿಯನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ತಂತಿಯ ಒಟ್ಟು ಬೆಲೆ ರೂ. ೨೧,೨೫೦/ ಆಗಿರುತ್ತದೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
ಕೋಲಾರ ನಗರ ಪೊಲೀಸ್ ಠಾಣೆಯಲ್ಲ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೭-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ರಾಮರಾಯನ ಕೋಟೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ಎಂ.ನಾರಾಯಣಸ್ವಾಮಿ ರವರನ್ನು ಗೋಕುಲ್ ಕಾಲೇಜ್ ಬಳಿ ಬಲವಂತವಾಗಿ ಅಪಹರಿಸಿದ ಎ.ಪಿ.ಎಂ.ಸಿ ಯಾರ್ಡ್ ಅಧ್ಯಕ್ಷರಾದ ಎಸ್.ನಾರಾಯಣಗೌಡ ಎಂಬುವರು ಮುಳಬಾಗಿಲಿನ ಮಲ್ಲನಾಯಕನಹಳ್ಳಿ ರಸ್ತೆ ಏಡಿಪಾಳ್ಯದಲ್ಲಿ ಒಂದು ರೂಮಿನಲ್ಲಿ ಕೂಡಿಹಾಕಿ ಅವಾಚ್ಯ ಶಬ್ದಗಳಿಂದ ಬೈದು ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ವೇಮಗಲ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಧನಮಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೦೪-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಧನಮಟ್ನಹಳ್ಳಿ ಗ್ರಾಮದ ವಾಸಿ ಮುನಿಯಪ್ಪ ಎಂಬುವರು ತಮ್ಮ ಸರ್ವೆ ನಂಬರ್ ೮೦ ರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಚೆನ್ನಸಂದ್ರ ಗ್ರಾಮದ ವಾಸಿಗಳಾದ ಸಿ.ಸೊಣ್ಣೇಗೌಡ, ಕೃಷ್ಣಪ್ಪ, ಮತ್ತು ಆನಂದ ಎಂಬುವರು ಮುನಿಯಪ್ಪ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice



