ದಿನದ ಅಪರಾಧಗಳ ಪಕ್ಷಿನೋಟ ೦೮ ನೇ ಜುಲ್ಯೆ ೨೦೦೯

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಕಾರಂಜಿಕಟ್ಟೆ ೨ ನೇ ಕ್ರಾಸ್ ವಾಸಿ ಶ್ರೀಮತಿ ಮಂಜುಳಮ್ಮ ಎಂಬುವರ ವಾಸದ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ರಾತ್ರಿ ಮಂಜುಳಮ್ಮ ಮನೆಯ ಬೀಗ ಹೊಡೆದು ಒಳ ಪ್ರವೇಶಿಸಿದ ಯಾರೋ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳು ಹಾಗೂ ರೂ, ೫,೦೦೦/ ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹೂವಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೪-೦೭-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಹೂವಳ್ಳಿ ಗ್ರಾಮದ ವಾಸಿ ರಾಮಚಂದ್ರ (೨೮) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಿವೆಂಕಟಪ್ಪ, ಆಂಜನಪ್ಪ, ನಾರಾಯಣಸ್ವಾಮಿ, ವೆಂಕರಾಮ, ಬೈರಮ್ಮ, ಮತ್ತು ಕಮಲಮ್ಮ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ರಾಡುಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಈ ಸಂಬಂಧ ಸ್ಥಳದಲ್ಲಿ ಎರಡೂ ಗುಂಪಿನವರು ಹೊಡೆದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಹಲ್ಲೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ದಳಸನೂರು ಅರಣ್ಯ ಪ್ರದೇಶದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ವನಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಕಣಾಚಾರಿ ಎಂಬುವರ ಮೇಲೆ ಜಗಳ ತೆಗೆದ ಪಾಳ್ಯ ಗ್ರಾಮದ ವಾಸಿಗಳಾದ ಕದಿರುವೇಲು ಹಾಗೂ ಮತ್ತಿತರೇ ಮೂರು ಜನರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೮

-ಸ್ಥಳ ದಂಡ ಮೊತ್ತ: ರೂ. ೩೦೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply