ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಆಂಜನೇಯ ಸ್ವಾಮಿ ಗುಡಿ ಬೀದಿಯ ವಾಸಿ ವೆಂಕಟೇಶ್ ಎಂಬುವರ ಹೀರೋಹೋಂಡಾ ಸ್ಪ್ಲೆಂಡರ್ ಸಂಖ್ಯೆ ಕೆಎ-೦೬-ಎಸ್-೬೬೮೦ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಮದು ೨೧೩೦ ಗಂಟೆ ಸಮಯದಲ್ಲಿ ವೆಂಕಟೇಶ್ ರವರು ತಮ್ಮ ವಾಹನವನ್ನು ತಮ್ಮ ಮನೆಯ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ೨೪,೦೦೦/ ಆಗಿರುತ್ತದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲ್ಲುಕು ಮುರಕನಕುಂಟೆ ಗ್ರಾಮದ ವಾಸಿಯಾದ ಮಮ್ತಾಜ್ ಮತ್ತು ಅದೇ ಗ್ರಾಮದ ವಾಸಿಯಾದ ಕೃಷ್ಣೇಗೌಡ ಎಂಬುವರು ನಡುವೆ ಸರ್ವೆ ನಂಬರ್ ೮೯ ರಲ್ಲಿ ಜಮೀನಿನ ವಿವಾದವಿದ್ದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ. ಈಗಿರುವಾಗ ದಿನಾಂಕ: ೦೮-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಕೃಷ್ಣಗೌಡ ರವರು ಜಮೀನನಲ್ಲಿ ಉಳುಮೆ ಮಾಡಲು ಹೋಗಿದ್ದು ಅಡ್ಡಿಪಡಿಸಲು ಹೋದ ಮಮ್ತಾಜ್ ರವರನ್ನು ಅವಾಚ್ಯ ಶಬ್ದಗಳಿಂದ ಬೈದು ಕೈ ಮತ್ತು ಕಲ್ಲಿನಿಂದ ಹೊಡೆದ ಗಾಯಪಡಿಸಿರುತ್ತಾರೆ.
ಇತರೆ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹರಟಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಹರಟಿ ಗ್ರಾಮದ ವಾಸಿ ಎನ್.ವಿ.ಪ್ರಕಾಶ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಸುಬ್ರಮಣಿ, ಮುರುಗಪ್ಪ ಮತ್ತು ಜನಾರ್ಧನ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಪರಸ್ಪರರ ನಡುವೆ ಇದ್ದ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೧೮
-ಸ್ಥಳ ದಂಡ ಮೊತ್ತ: ರೂ. ೩೦೦೦/
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.



