ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೩
ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಚೌಡದೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೨ ಗ್ಯಾಸ್ ಸಿಲಿಂಡರ್, ೧೦ ಲೀಟರ್ ಪಾಮಾಯಿಲ್ ಎಣ್ಣೆ ಮತ್ತು ಒಂದು ವಾಟರ್ ಪಿಲ್ಟರ್‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೬,೦೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಕಮಲ ಡಿ.ವಿ. ಎಂಬುವರು ದೂರನ್ನು ನೀಡಿರುತ್ತಾರೆ,
ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ದೊಡ್ಡವಲ್ಲಬ್ಬಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೨ ಗ್ಯಾಸ್ ಸಿಲಿಂಡರ್ ಮತ್ತು ಒಂದು ಗ್ರೈಂಡರ್‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೯,೦೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀರಾಮಚಂದ್ರ ಎಂಬುವರು ದೂರನ್ನು ನೀಡಿರುತ್ತಾರೆ,
ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಕುರುಗಲ್ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೩ ಗ್ಯಾಸ್ ಸಿಲಿಂಡರ್ ಮತ್ತು ಒಂದು ಗ್ರೈಂಡರ್‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೭,೫೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀ ಚಿನ್ನಯ್ಯ ಎಂಬುವರು ದೂರನ್ನು ನೀಡಿರುತ್ತಾರೆ,
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೦೭-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮಲ್ಲೇಕುಪ್ಪ ಗ್ರಾಮದ ವಾಸಿಯಾದ ರಾಮಚಂದ್ರಪ್ಪ ಎಂಬವರು ಹಳೇಕುಪ್ಪ ಗ್ರಾಮದ ಬಳಿ ಹೊಂಗೆ ಮರದ ಕೆಳಗೆ ಮಲಗಿದ್ದರು. ಆ ಸಮಯದಲ್ಲಿ ಬಂದ ಲಾರಿ ಸಂಖ್ಯೆ ಕೆಎ-೫೩-೬೧೩೪ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಾಮಚಂದ್ರಪ್ಪ ರವರ ಕಾಲುಗಳ ಮೇಲೆ ಹತ್ತಿಸಿಕೊಂಡು ಹೋಗಿರುತ್ತಾನೆ. ಪರಿಣಾಮ ಎರೆಡು ಕಾಲುಗಳಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೯-೦೭-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಸಂಖ್ಯೆ ೬೬೨ ಪಿ.ಬಾಬು ಎಂಬುವರು ಕೋಲಾರ ನಗರದ ಪಲ್ಲವಿ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಆಟೋ ಸಂಖ್ಯೆ ಕೆಎ-೦೬-ಎ-೬೩೨ ರ ಚಾಲಕನಾದ ಮಂಜುನಾಥ ಎಂಬುವರು ತನ್ನ ಆಟೋ ಅನ್ನು ನಿಲುಗಡೆ ಇಲ್ಲದ ಸ್ಥಳದಲ್ಲಿ ನಿಲ್ಲಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದು. ಆಟೋ ವನ್ನು ತೆಗೆಯುವಂತೆ ಹೇಳಿದ್ದಕ್ಕೆ ಅವಾಚ್ಚಶಬ್ದಗಳಿಂದ ಬೈದು, ಸಮವಸ್ತ್ರವನ್ನು ಹಿಡಿದು ಎಳೆದಾಡಿ, ಕೈಯಿಂದ ಮುಖಕ್ಕೆ ಗುದ್ದಿ ರಕ್ತಗಾಯಪಡಿಸಿ ಸರ್ಕಾರಿ ಕೆಲಸಕ್ಕೆ ಅಡಚಣೆಯನ್ನುಂಟುಮಾಡಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



