ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಶ್ರೀನಿವಾಸಪುರ ತಾಲೂಕು ಗುಟ್ಟಪಲ್ಲಿ ಗ್ರಾಮದಲ್ಲಿರುವ ಶ್ರೀ ತಿಮ್ಮರಾಯಸ್ವಾಮಿ ದೇವಾಲಯಕ್ಕೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ಪಂಚಲೋಹದ ವಿಗ್ರಹಗಳು, ೬ ಹಿತ್ತಾಳೆ ಕಿರೀಟಗಳು, ೪ ಗ್ರಾಂ ಚಿನ್ನದ ಮಾಂಗಲ್ಯ ಮತ್ತು ಇತರೆ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೨೫,೦೦೦/-. ಈ ಬಗ್ಗೆ ವೆಂಕಟಶಾಮಿ, ಅಡವಿಚಂಬಕೂರು, ಶ್ರೀನಿವಾಸಪುರ ತಾಲೂಕು ಎಂಬುವರು ದೂರನ್ನು ನೀಡಿರುತ್ತಾರೆ,
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೦-೦೭-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಕೋಲಾರ ಪಟ್ಟಣದ ಪಿ.ಸಿ.ಬಡಾವಣೆ ವಾಸಿಯಾದ ಕೃಷ್ಣಪ್ಪ ಎಸ್ ಎಂಬವರ ಮಗಳಾದ ಕುಮಾರಿ ಸಿಂಧು(೭) ಎಂಬುವರು ಟೇಕಲ್ – ಕೋಲಾರ ರಸ್ತೆಯ ಸರ್ಕಾರಿ ಶಾಲೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೯೦೪೫ರ ಚಾಲಕ ತನ್ನ ದ್ವಿಚಕ್ರ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಸಿಂಧು ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಹಣೆಗೆ ಮತ್ತು ಕಾಲುಗಳಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೦-೦೭-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಸೀಸಂದ್ರ ಗ್ರಾಮದ ವಾಸಿಯಾದ ವೆಂಕಟೇಶಪ್ಪ ಎಂಬವರ ಮಗನಾದ ನಾರಾಯಣಸ್ವಾಮಿ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕ್ಯೂ-೮೨೩೭ರಲ್ಲಿ ರಾಷ್ಷ್ರೀಯ ಹದ್ದಾರಿ-೪ರ ಸೀಸಂದ್ರ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಕಾರ್ ಸಂಖ್ಯೆ ಕೆಎ-೦೨-ಎಂ-೫೫೭ರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ನಾರಾಯಣಸ್ವಾಮಿ ರವರಿಗೆ ಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice



