ದಿನದ ಅಪರಾಧಗಳ ಪಕ್ಷಿನೋಟ ೧೩ ನೇ ಜುಲ್ಯೆ ೨೦೦೯

July 12, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೩-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಶ್ರೀನಿವಾಸಪುರ ತಾಲೂಕು ನಂಬಿಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಸಂಯುಕ್ತ ಪ್ರೌಡ ಶಾಲೆಯ ಅಡಿಗೆ ಕೋಣೆಯ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ ೮ ಗ್ಯಾಸ್ ಸಿಲಿಂಡರ್‍, ೩೩ ಪಾಮೋಲೀನ್ ಎಣ್ಣೆ ಪಾಕೇಟ್ ಮತ್ತು ಅಲ್ಯೂಮಿನಿಯಂ ಪಾತ್ರೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ  ರೂ. ೧೫,೦೦೦/-. ಈ ಬಗ್ಗೆ ಪುರುಷೋತ್ತಮ, ಮುಖ್ಯ ಶಿಕ್ಷಕರು ಮತ್ತು ಪದನಿಮಿತ್ತ ಸಹಾಯಕ ಶಿಕ್ಷಣಾಧಿಕಾರಿಗಳು, ನಂಬಿಹಳ್ಳಿ ರವರು ದೂರನ್ನು ದಾಖಲಿಸಿರುತ್ತಾರೆ.

ಸಾಧಾರಣ ಕಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕುರುಬರಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ರಾತ್ರಿ ಗ್ರಾಮದ ಸಮೀಪ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ೭೨೦ ಮೀಟರ್‍ ಉದ್ದದ ಬೆಸ್ಕಾಂ ಇಲಾಖೆಗೆ ಸೇರಿದ ಎ.ಸಿ.ಎಸ್.ಆರ್‍ ವೈರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರಿನ ಬೆಲೆ ರೂ. ೨೦,೮೮೮/ ಆಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೭-೨೦೦೯ ರಂದು ೧೦೧೫ ಗಂಟೆ ಸಮಯದಲ್ಲಿ ಮಂಜುಳಾ ಎಂಬುವರು ತಾವು ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾಲೂರು ಪುರ ರೈಲ್ವೆ ಸ್ಟೇಷನ್ ಬಳಿಯ ಸರ್ಕಾರಿ ಶಾಲೆಗೆ ಕೆಎ-೦೧-ಎಸ್-೬೦೧೬ ಸಂಖ್ಯೆಯ ಆಕ್ಟೀವ್ ಹೋಂಡಾ ವಾಹನದಲ್ಲಿ ರೈಲ್ವೆ ಸೇತುವೆಯ ಮೇಲೆ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಎಪಿ-೩೧-ಡಬ್ಲ್ಯೂ-೮೦೪೩ ಸಂಖ್ಯೆಯ ಗೂಡ್ಸ್ ಟೆಂಪೋ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಮಂಜುಳಾರವರು ಟಾರ್‍ ರಸ್ತೆಯ ಮೇಲಿ ಬಿದ್ದು ತಲೆಗೆ ತೀವ್ರವಾದ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೦೭-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಕೋಲಾರ ನಗರ ವಾಸಿಯಾದ ಸೈಯದ್ ಇರ್ಫಾನ್ ಎಂಬುವನು ಬಂಬೂಬಜಾರಿನಲ್ಲಿರುವ ಎಸ್.ಜೆ.ಎಸ್ ಹಾರ್ಡ್‌ವೇರ್‍ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಪೂಲ್ ಷಾ ಮೊಹಲ್ಲಾದ ವಾಸಿ ಜಮೀಲ್ ಖಾನ್ ಎಂಬುವರು ಸೈಯದ್ ಇರ್ಫಾನ್ ರವರ ಮೇಲೆ ಜಗಳ ತೆಗೆದು ಏಕಾಏಕಿ ಚಾಕುವಿನಿಂದ ಬೆನ್ನಿನ ಹಿಂಭಾಗಕ್ಕೆ ತಿವಿದು ಕೊಲೆ ಮಾಡಲು ಪ್ರಯತ್ನಿಸಿರುತ್ತಾನೆ. ಕೌಟುಂಬಿಕ ವಿವಾದಗಳ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಬಿ.ಇ.ಒ ಕಛೇರಿ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೨-೦೭-೨೦೦೯ ರಂದು ರಾತ್ರಿ ೨೦೦೦ ಗಂಟೆ ಸಮಯದಲ್ಲಿ ಬಸವನತ್ತ ಗ್ರಾಮದ ವಾಸಿ ಬೀರೇಶ್ ಎಂಬುವರ ಮೇಲೆ ಜಗಳ ತೆಗೆದ ಬಾಬು, ವಿಜಿಕುಮಾರ್‍ ಮತ್ತು ಶಿವರಾಜ್ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಗುದ್ದಿ ಕಲ್ಲಿನಿಂದ ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.