ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಮೊಗಿಲಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೨-೦೭-೨೦೦೯ ರಂದು ರಾತ್ರಿ ಶಾಲೆಯ ಬೀಗವನ್ನು ಹೊಡೆದುಹಾಕಿ ಒಳಪ್ರವೇಶಿಸಿದ ಯಾರೋ ಕಳ್ಳರು ಶಾಲೆಯಲ್ಲಿದ್ದ ೨ ಗ್ಯಾಸ್ ಸಿಲಿಂಡರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಕಲಾವತಿ ರವರು ದೂರು ನೀಡಿದ್ದು ಕಳುವಾದ ವಸ್ತುಗಳ ಒಟ್ಟು ಬೆಲೆ ರೂ. ೫೦೦೦/ ಆಗಿರುತ್ತದೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೭-೨೦೦೯ ರಂದು ೨೨೩೦ ಗಂಟೆ ಸಮಯದಲ್ಲಿ ಮೂಲತಃ ಮಹಾರಾಷ್ಟ್ರ ರಾಜ್ಯದ ವಾಸಿಯಾದ ಲಕ್ಷ್ಮಣ ಎಂಬುವರು ಕ್ರಷರ್ ಲಾರಿ ಸಂಖ್ಯೆ ಎಂಹೆಚ್-೨೯-ಆರ್-೯೪೪ ಅನ್ನು ಚಾಲನೆ ಮಾಡಿಕೊಂಡು ಮುಳಬಾಗಿಲು ತಾಲೂಕು ಎನ್.ಹೆಚ್ ೪ ರಸ್ತೆಯ ಎಂ.ಎನ್.ಹಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಲಾರಿ ಸಂಖ್ಯೆ ಟಿಎನ್-೨೩-ಎಡಿ-೨೮೧೪ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕ್ರಷರ್ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಎರಡೂ ವಾಹನಗಳು ಜಖಂಗೊಂಡು ಕ್ರಷರ್ ಲಾರಿಯಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೭-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಈಚರ್ ಟೆಂಪೋ ಸಂಖ್ಯೆ ಕೆಎ-೦೫-ಸಿ-೩೭೨೬ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೋಲಾರ-ಶ್ರೀನಿವಾಸಪುರ ರಸ್ತೆಯ ಹೂವಳ್ಳಿ ಗೇಟ್ ಬಳಿ ದ್ವಿಚಕ್ರವಾಹನ ಮತ್ತು ಆಟೋವೊಂದಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಾದ ಶಂಕರಪ್ಪ ಮತ್ತು ವೆಂಕಟಲಕ್ಷ್ಮಮ್ಮ ಎಂಬುವರು ಗಾಯಗೊಂಡಿದ್ದು ಆಟೋ ಜಖಂಗೊಂಡಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಸ್ಟೀಡಿಯಂನಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯುತ್ತಿದ್ದು ಕೋಲಾರ ಪೇಟೆಚಾಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಬು.ವಿ ಎಂಬುವರ ಮೇಲೆ ಜಗಳ ತೆಗೆದ ರಂಗಪ್ಪ ಮತ್ತಿತರೇ ೫ ಜನರು ಅಕ್ರಮಗುಂಪು ಕಟ್ಟಿಕೊಂಡು ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಕ್ರೀಡಾಕೂಟಕ್ಕೆ ಹೆಸರು ನೋಂದಾಯಿಸಿಕೊಳ್ಳುವ ವಿಚಾರದ ಹಿನ್ನೆಲೆ ಈ ಕೃತ್ಯಕ್ಕೆ ಕಾರಣವಾಗಿದ್ದು ಗಾಯಾಳು ಬಾಬು ರವರ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೧೩
-ಸ್ಥಳ ದಂಡ ಮೊತ್ತ: ರೂ. ೨೦೦೦/
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



