ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೩-೦೭-೩೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರನಗರದ ವಿನಾಯಕನಗರದ ವಾಸಿ ನಾರಾಯಣ ಎಂಬುವರ ಮನೆಯ ಕಾಂಪೌಂಡಿನಲ್ಲಿ ನಿಲ್ಲಿಸಿದ್ದಿ ಟಿವಿಎಸ್ ಎಕ್ಸ್‌ಎಲ್ ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೪೨೧೪ಅನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಕಳುವಾದ ವಾಹನದ ಬೆಲೆ ರೂ. ೨೦,೦೦೦/- ಗಳಾಗಿರುತ್ತದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೩೧-೧೦-೨೦೦೮ ರಂದು ಕೋಲಾರ ತಾಲೂಕು ಗಂಗಾಪುರ ಗ್ರಾಮದ ವಾಸಿ ಟಿ.ವಿಮಲ ಎಂಬುವರನ್ನು ರಮೇಶ ಎಂಬುವರಿಗೆ ೧೦೦ ಗ್ರಾಂ ಬಂಗಾರದ ಒಡವೆಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟಿದ್ದರು. ನಂತರ ಇನ್ನು ಹೆಚ್ಚಿನ ವರದಕ್ಷಿಣೆ ತರುವಂತೆ ಗಂಡ ರಮೇಶ ಮತ್ತು ಅವರ ಮನೆಯವರು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ,
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಬಂಗಾರುಪೇಟೆ ತಾಲೂಕು ಹನುಮಂತರಾಯನದಿನ್ನೆ ವಾಸಿಗಳಾದ ಕೃಷ್ಣಪ್ಪ ಮತ್ತು ವೆಂಕಟೇಶ ಎಂಬುವರು ಕೋಲಾರ ನಗರದ ಎಂ.ಬಿ.ರಸ್ತೆಯ ರುಚಿ ಸಾಗರ್ ಹೋಟಲ್ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಬಜಾಜ್ ಡಿಸ್ಕವರ್ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್-೫೯೩೦ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟೇಶ್ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಗಾಯಗಳುಂಟಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್.ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೭-೨೦೦೯ ರಂದು ೧೮೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ಮುನಿನಾರಾಯಣಪ್ಪ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೨-೭೪೯೨ ರಲ್ಲಿ ಯಾರಂಗಟ್ಟ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್ ಸಂಖ್ಯೆ ಕೆಎ-೦೭-ಟಿ-೬೦೬೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರನಾದ ಮುನಿನಾರಾಯಣಪ್ಪ ರವರಿಗೆ ಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೨
ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೭-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ದೊಡ್ಡಹತ್ತಿಹಳ್ಳಿ ಗ್ರಾಮದ ವಾಸಿಯಾದ ಜನಾರ್ಧನ್ ರವರ ಮೇಲೆ ಕೆರೆಯಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮ ವಾಸಿಯಾದ ವೇಣುಗೋಪಾಲ ಮತ್ತು ಇತರೆ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳನ್ನು ಹಿಡಿದೊಕೊಂಡು ಬಂದು ಹೊಡೆದು ಗಾಯಪಡಿಸಿರುತ್ತಾರೆ.
ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೭-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ದೊಡ್ಡಹತ್ತಿಹಳ್ಳಿ ಗ್ರಾಮದ ವಾಸಿಯಾದ ಆರ್.ಮಂಜುನಾಥ ರವರ ಮೇಲೆ ಡೈರಿ ಕಾರ್ಯಾದರ್ಶಿ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮ ವಾಸಿಯಾದ ಸುಬ್ರಮಣಿ ಮತ್ತು ಇತರೆ ೯ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳನ್ನು ಹಿಡಿದೊಕೊಂಡು ಮನೆಯೋಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಚಶಬ್ದಗಳಿಂದ ಬೈದು ದೊಣ್ಣೆ ಮತ್ತು ರಾಡ್ ನಿಂದ ಹೊಡೆದು ಗಾಯಪಡಿಸಿರುತ್ತಾರೆ.
ಹಲ್ಲೆ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೭-೨೦೦೯ ರಂದು ಮುಳಬಾಗಿಲು ತಾಲೂಕು ಬಿಸನಹಳ್ಳಿ ಗ್ರಾಮದ ವಾಸಿಯಾದ ರಾಮಕೃಷ್ಣಪ್ಪ ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಯಾದ ಕೃಷ್ಣಮೂರ್ತಿ ಎಂಬುವರು ರಾಮಕೃಷ್ಣಪ್ಪ ರವರ ಜಮೀನಿನಲ್ಲಿ ಅತಿಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ನಾಶಪಡಿಸಿ ಅವಾಚ್ಚಶಬ್ದಗಳಿಂದ ಬೈದು ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ,
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೭-೨೦೦೯ ರಂದು ೦೨೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ರೋಜರಪಲ್ಲಿ ಗ್ರಾಮದ ವಾಸಿ ಶ್ರೀಮತಿ ಮಂಜುಳ(೧೮) ಎಂಬುವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



