ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲುಕು ಮದನಹಟ್ಟಿ ಗ್ರಾಮದ ವಾಸಿಯಾದ ಶ್ಯಾಮಲ ರವರು ತಮ್ಮ ಗ್ರಾಮದ ಬಸ್ ಗೇಟ್ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂ.ಕೆಎ-೦೮-ಜೆ-೬೫೯೦ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶ್ಯಾಮಲರವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಕೆಗೆ ಗಾಯಗಳಾಗಿರುತ್ತವೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೨
ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫-೦೭-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲೂಕು ಆಲಂಬಾಡಿ ಗ್ರಾಮದ ವಾಸಿಗಳಾದ ಜಯಮ್ಮ ಮತ್ತು ಮುನಿರಾಜು ಎಂಬುವವರು ತಮ್ಮ ಗ್ರಾಮದಲ್ಲಿ ಎರಡು ಗುಂಪುಗಳಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಒಬ್ಬರಿಗೊಬ್ಬರು ದೊಣ್ನೆ ಮತ್ತು ಕಲ್ಲುಗಳಿಂದ ಹೊಡದಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಸಣ್ಣಪುಟ್ಟ ಗಾಯಗಳನ್ನುಂಟು ಮಾಡಿಕೊಂಡಿರುತ್ತಾರೆ. ಈ ಕೃತ್ಯವು ಹಳೇ ದ್ವೇಷದ ಹಿನ್ನಲೆಯಲ್ಲಿ ನಡೆದಿರುತ್ತದೆ. ಈ ಬಗ್ಗೆ ದೂರು ಮತ್ತು ಪ್ರತಿ ದೂರುಗಳು ದಾಖಲಾಗಿರುತ್ತವೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೦೮
-ಸ್ಥಳ ದಂಡ ಮೊತ್ತ: ರೂ. ೮೦೦/-
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



