ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜುಲ್ಯೆ ೨೦೦೯

July 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಈ ಕೃತ್ಯವು ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ವಾಸಿಯಾದ ಶಿಕ್ಷಕಿ ಶ್ರೀಮತಿ ಭಾರತೀ ಎಂಬುವರ ಮನೆಯಲ್ಲಿ ನಡೆದಿರುತ್ತದೆ.  ದಿನಾಂಕ ೨೭-೦೭-೨೦೦೯ ರಂದು ಭಾರತೀ ರವರು ತಮ್ಮ ಮಾಂಗಲ್ಯ ಸರವನ್ನು ತಮ್ಮ ಮನೆಯ ಕಿಟಿಕಿಯಲ್ಲಿ ಇಟ್ಟು ಮಲಗಿದ್ದು ರಾತ್ರಿ ೧:೧೫ ಗಂಟೆ ಸಮಯದಲ್ಲಿ ಯಾರೋ ೨೦ ರಿಂದ ೨೫ ವರ್ಷ ವಯಸ್ಸಿನ ಒಬ್ಬ ಅಸಾಮಿ ಕಿಟಿಕಿ ಸರಳುಗಳ ಮಧ್ಯ ಕೈಹಾಕಿ ಸದರಿ ಸರವನ್ನು ಕಳುವು ಮಾಡಿಕೊಂಡು ಹೋಗಿರುತ್ತಾನೆ. ಕಳುವಾದ ಸರ ಸುಮಾರು ೨೦ ಗ್ರಾಂ ತೂಕದ್ದಾಗಿದ್ದು ೨೦.೦೦೦/- ರೂ ಬೆಲೆ ಬಾಳುವುದಾಗಿರುತ್ತದೆ ಎಂದು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ  ಪ್ರಯತ್ನಕ್ಕೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೭-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಕೆಂಚಾಪುರ ಗ್ರಾಮದ ವಾಸಿಯಾದ ಕುಮಾರಿ. ಆರತಿ ಎಂಬುವರು ತಮ್ಮ ಮನೆಯಲ್ಲಿದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಯಾದ ಅಂಜಿನಪ್ಪ ಎಂಬುವರು ಆರತಿ ರವರ ಮನೆಗೆ ಬಂದು ಅಕೆಯನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿದ್ದು ಆಕೆ ಕಿರಿಚಾಡಿದಾಗ ಅವರ ತಾಯಿ ಮತ್ತು ಇತರೆ ಯವರು ಬಂದು ಅಂಜಿನಪ್ಪನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ  ಪ್ರಯತ್ನಕ್ಕೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೭-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಮುಳಬಾಗಿಲು  ತಾಲ್ಲೂಕು ಪೆತ್ತಾಂಡ್ಲಹಳ್ಳಿ ಗ್ರಾಮದ ವಾಸಿಯಾದ  ಕುಮಾರಮ್ಮ  ಎಂಬುವರು ತಮ್ಮ ಮನೆಯ ಪಕ್ಕದಲ್ಲಿ ಸ್ನಾನ ಮಾಡುತ್ತಿದ್ದರು.   ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಯಾದ ವೆಂಕಟೇಶಪ್ಪ ಎಂಬುವನು ಕುಮಾರಮ್ಮ ನನ್ನು ಹಿಡಿದು ಎಳದಾಡಿ  ಬಟ್ಟೆಗಳನ್ನು ಕಿತ್ತು ಮಾನಭಂಗ ಮಾಡಲು ಪ್ರಯತ್ನಿಸಿರುತ್ತಾನೆ. 

ರಸ್ತೆ ಅಪಘಾತಗಳು:  ೦೨

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಅಹನ್ಯ ಗ್ರಾಮದ ವಾಸಿ ವೆಂಕಟಸ್ವಾಮಿರೆಡ್ಡಿ ಎಂಬುವರು ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೮-ಟಿ-೨೨೫೬ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ವೆಂಕಟಸ್ವಾಮಿರೆಡ್ಡಿ ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಸಾಗಿಸುವ ಮಾರ್ಗ ಮದ್ಯ ಮೃತಪಟ್ಟಿರುತ್ತಾನೆ.

-ಸಾಧಾರಣ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ  ವಾಸಿ ರಯಾನ್ ಪಾಷ(೭) ಎಂಬುವರು ಪಟ್ಟಣದ ಇಕ್ಬಾಲ್‌ಮೊಹಲ್ಲಾ ದಲ್ಲಿ ರಸ್ತೆ ದಾಟುತ್ತಿದ್ದರು. ಆ ಸಮಯದಲ್ಲಿ ಬಂದ ಸ್ಕೂಲ್ ವ್ಯಾನ್ ಸಂಖ್ಯೆ ಕೆಎ-೦೨-ಬಿ-೫೨೪೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ರಯಾನ್ ಪಾಷ  ರವರ ಎರೆಡು ಕಾಲುಗಳಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೭-೦೭-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಶಾಗತ್ತೂರು ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ಜಮೀನು ಬಗ್ಗೆ ವಿಚಾರಣೆಗಾಗಿ ಪೊಲೀಸರೊಂದಿಗೆ ಬಂದಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಈಶ್ವರಪ್ಪ ಮತ್ತು ಇತರರು ಅಕ್ರಮ ಗುಂಪುಕಟ್ಟಿಕೊಂಡು ಬಂದು ಕೈಗಳಿಂದ, ಕಲ್ಲುಗಳಿಂದ ಮತ್ತು ದೊಣ್ಣೆಯಿಂದ ಹೊಡೆದಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಲಕ್ಕೂರು ಗ್ರಾಮದ ವಾಸಿಗಳಾದ ರಾಜೇಂದ್ರ ಮತ್ತು  ಅನಿಲ್ ಕುಮಾರ್‍ ಎಂಬುವರ ನಡುವೆ ಖಾಲಿ ನಿವೇಶನದ ವಿಚಾರದಲ್ಲಿ ತಕರಾರಿದ್ದು ಎರೆಡೂ ಕಡೆಯವರು ಅಕ್ರಮ ಗುಂಫುಗಳನ್ನು ಪಟ್ಟಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರುಗಳು ದಾಖಲಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮುದುವಾಡಿ ಹೊಸಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಗ್ರಾಮದ ದೇವಸ್ಥಾನದ ಬಳಿ ಇದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸರೆಡ್ಡಿ ಮತ್ತು ಇತರೆ ೪ ಜನರು ಹಳೇ ವೈಷ್ಯಮ್ಯದ ಹಿನ್ನೆಲೆಯಲ್ಲಿ ಜಗಳ ತೆಗೆದು ಕಲ್ಲಿನಿಂದ ಮತ್ತು ದೊಣ್ಣೆಯಿಂದ ಹೊಡೆದು ಜಾತಿನಿಂದನೆ ಮಾಡಿರುತ್ತಾರೆ, ಜಗಳ ಬಿಡಿಸಲು ಬಂದ ಶ್ರೀನಿವಾಸ ಮತ್ತು ಈಶ್ವರಪ್ಪ ರವರಿಗೂ ಹೊಡೆದು ಗಾಯಪಡಿಸಿರುತ್ತಾರೆ. ಗಾಯಾಳುಗಳು ಚಿಕಿತ್ಸೆಗಾಗಿ ಕೋಲಾರದ ಎಸ್‌.ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿರುತ್ತಾರೆ.   

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೧-೦೭-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲೂಕು ಕೂಂತಾಂಡ್ಲಹಳ್ಳಿ ಗ್ರಾಮದ ವಾಸಿಯಾದ ವೆಂಕಟರವಣಪ್ಪ ಎಂಬುವರು ಮಗಳಾದ ನಾಗವೇಣಿ ಎಂಬುವರು ಮನೆಯಿಂದ ಸೌದೆ ತರುವುದಾಗಿ ಹೊರಗೆ ಹೋದವಳು ಮನೆಗೆ ವಾಪಸ್ಸು  ಬಾರದೆ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.