ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೦-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೩
ಮಾಲೂರು ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೧೦-೦೯ ರಂದು ರಾತ್ರಿ ಯಾರೋ ಕಳ್ಳರು ಮಾಲೂರು ಪುರದ ಪಟೇಲರ ಬೀದಿಯಲ್ಲಿ ವಾಸವಾಗಿರುವ ಶೋಭಾ ರವರ ಮನೆಯ ಬೀಗವನ್ನು ಕಬ್ಬಿಣದ ರಾಡಿನಿಂದ ಹೊಡೆದು ಒಳಗೆ ಪ್ರವೇಶ ಮಾಡಿ ಮನೆಯಲ್ಲಿದ್ದ ರೂ.೨೪,೦೦೦/- ಬೆಲೆಯ ಬೆಳ್ಳಿ ಸಾಮಾನುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶೋಭಾರವರು ದಿನಾಂಕ ೨೭-೧೦-೦೯ ರಂದು ೧೧೦೦ ಗಂಟೆ ಸಮಯದಲ್ಲಿ ಪ್ರಕರಣ ದಾಖಲು ಮಾಡಿರುತ್ತಾರೆ.
ಕೋಲಾರ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೧೦-೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಚಾಮರಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಬೀಗವನ್ನು ಹೊಡೆದು ಒಳಗೆ ಪ್ರವೇಶ ಮಾಡಿ ಶಾಲೆಯಲ್ಲಿದ್ದ ರೂ.೧,೫೦೦/- ಬೆಲೆಯ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್‌ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಯರಾದ ಎಂ.ಜಿ.ಲೀಲಾವತಮ್ಮ ರವರು ದಿನಾಂಕ ೨೬-೧೦-೦೯ ರಂದು ೧೮೪೫ ಗಂಟೆ ಸಮಯದಲ್ಲಿ ಪ್ರಕರಣ ದಾಖಲು ಮಾಡಿರುತ್ತಾರೆ.
ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೧೦-೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ನಗರದ ರಹಮತ್‌ನಗರದಲ್ಲಿರುವ ಸರ್ಕಾರಿ ಶಾಲೆಯ ಬೀಗವನ್ನು ಹೊಡೆದು ಒಳಗೆ ಪ್ರವೇಶ ಮಾಡಿ ಶಾಲೆಯಲ್ಲಿದ್ದ ರೂ.೩,೪೫೦/- ಬೆಲೆಯ ನೀರಿನ ಪಂಪ್‌ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಯರಾದ ಸಾಜೀದಾ ಬೇಗಂ ರವರು ದಿನಾಂಕ ೨೬-೧೦-೦೯ ರಂದು ೧೬೩೦ ಗಂಟೆ ಸಮಯದಲ್ಲಿ ಪ್ರಕರಣ ದಾಖಲು ಮಾಡಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೦-೦೯ ರಂದು ೨೦೩೦ ಗಂಟೆ ಸಮಯದಲ್ಲಿ ಬೆಂಗಳೂರು ಜಿಲ್ಲೆಯ ಮುಗಬಾಳ ಗ್ರಾಮದ ವಾಸಿಯಾದ ಪುಟ್ಟರಾಜು ಮತ್ತು ಅತನ ಪತ್ನಿಯಾದ ರಾಧ ಎಂಬುವರು ಕೋಲಾರ ಕಡೆಯಿಂದ ತಮ್ಮ ದ್ವಿಚಕ್ರ ವಾಹನ ಸಂ.ಕೆಎ-೫೩-ಇ-೫೪೧೧ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರ ಚಲುವನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ಟಾಟೋ ಸುಮೊ ಸಂ. ಕೆಎ-೩೬-ಎಂ-೫೫೭೭ ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮವಾಗಿ ದ್ವಿಚಕ್ರ ವಾಹನದ ಸವಾರರಾ ಪುಟ್ಟರಾಜು ರವರಿಗೆ ತೀವ್ರವಾದ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿರುತ್ತಾರೆ. ರಾಧ ರವರಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
-ಸಾಧಾರಣ: ೦೨
ಕೋಲಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೦-೦೯ ರಂದು ೧೬೧೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಗುಜ್ಜನಹಳ್ಳಿ ಗ್ರಾಮದ ವಾಸಿಯಾದ ಈರೇಗೌಡ ಮತ್ತು ಇತರೆ ೪ ಜನರು ಟಾಟ ಏಸ್ ವಾಹನ ಸಂಖ್ಯೆ ಕೆಎ-೦೭-೬೬೨೦ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರ ಕ್ಲಾಸಿಕ್ ಡಾಬಾ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ಕೆಎಸ್‌ಅರ್‌ಟಿಸಿ ಬಸ್ ಸಂ. ಕೆಎ-೦೭-ಎಫ್-೧೧೦೯ ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮವಾಗಿ ೪ ಜನರಿಗೆ ಗಾಯಗಳಾಗಿರುತ್ತದೆ.
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾಮ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೦-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಗಂಜಿಕುಂಟೆ ಗ್ರಾಮದ ವಾಸಿ ಜಿ.ಕೋದಂಡರಾಮ ಎಂಬುವರ ೦೯ ವರ್ಷದ ಮಗನಾದ ಕಿಶೋರ್ ಎಂಬುವನು ತನ್ನ ಗ್ರಾಮದ ಬಳಿ ನಡೆದುಕೊಂಡು ಬರುತ್ತಿದ್ದನು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್ ಸಂಖ್ಯೆ ಕೆಎ-೦೭-ಟಿ-೮೫೮೩ ರ ಚಾಲಕ ತನ್ನ ಟ್ರಾಕ್ಟರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಡಿಕ್ಕಿ ಹೊಡೆದಿರುತ್ತಾನೆ. ಟ್ರಾಕ್ಟರಿನ ಮುಂದಿನ ಚಕ್ರವೊಂದು ಕಿಶೋರ್‍ನ ತಲೆಯ ಮೇಲೆ ಹರಿದಿರುತ್ತದೆ. ಗಾಯಾಳುವನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೭-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕ್ಯಾಲನೂರು ಗ್ರಾಮದ ವಾಸಿ ಸಲ್ಮಾಸುಲ್ತಾನ ಎಂಬುವರ ಮನೆಗೆ ಅದೇ ಗ್ರಾಮದ ವಾಸಿಗಳಾದ ಶಮೀಉಲ್ಲಾ ಮತ್ತು ಇತರೆ ೬ ಜನರು ಅಕ್ರಮ ಗುಂಪು ಸಲ್ಮಾಸುಲ್ತಾನ ರವರ ಮನೆಯೋಳಗೆ ಅಕ್ರಮ ಪ್ರವೇಶ ಮಾಡಿ ಮನೆ ವಿಚಾರದಲ್ಲಿ ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು : ೦೯
-ಸ್ಥಳ ದಂಡ ಮೊತ್ತ : ರೂ. ೧,೪೦೦/-
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.