ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೧-೧೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಸುಮಾರು ೩೦-೩೫ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಯಾರೋ ದುರಾತ್ಮರು ಕಲ್ಲು ಚಪ್ಪಡಿಯಿಂದ ಹೊಡೆದು ಕೊಲೆಗೈದಿರುವ ಘಟನೆ ಗಲ್ ಪೇಟೆ ಠಾಣಾ ಸರಹದ್ದಿನಲ್ಲಿ ಸಂಭಂವಿಸಿರುತ್ತದೆ. ಅಪರಿಚಿತ ವ್ಯಕ್ತಿ ದಿನಾಂಕ ೩೦-೧೧-೨೦೦೯ ರಂದು ರಾತ್ರಿ ೧೧೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕಾಳಮ್ಮಗುಡಿ ಬೀದಿ ಯಲ್ಲಿರುವ ಖಾನ್ಸಬಾ ಮಸೀದಿ ಬಳಿ ತೀವ್ರವಾಗಿ ಗಾಯಗೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದ್ದು ರಾತ್ರಿ ಗಸ್ತಿನಲ್ಲಿದ್ದ ಸಂಚಾರಿ ಪೊಲೀಸ್ ಠಾಣೆಯ ಎ.ಎಸ್.ಐ. ಶ್ರೀನಿವಾಸ್ ರವರು ಅಪರಿಚಿತ ವ್ಯಕ್ತಿಯನ್ನು ಎಸ್.ಎನ್.ಆರ್. ಆಸ್ಪತ್ರೆಗೆ ದಾಖಲಿಸಿದ್ದು ರಾತ್ರಿ ೦೦೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾನೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೨
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೧-೨೦೦೯ ರಂದು ೧೫೦೦ ಗಂಟೆಗೆ ಕೋಲಾರ-ಬೆಂಗಳೂರು ಎನ್.ಹೆಚ್ ೪ ರಸ್ತೆಯ ಮಡೇರಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಡೇರಹಳ್ಳಿ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರಿಗೆ ಕೆಎ-೦೨-ಇಜೆ-೯೭೯೬ ಸಂಖ್ಯೆಯ ಬಜಾಜ್ ಪಲ್ಸರ್ ಚಾಲಕ ನನ್ನೆಜಾನ್ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದು ಇದರ ಪರಿಣಾಮ ವೆಂಕಟೇಶಪ್ಪ ರವರಿಗೆ ತೀವ್ರವಾದ ಗಾಯಗಳಾಗಿತ್ತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಇವರು ದಿನಾಂಕ ೩೦-೧೧-೨೦೦೯ ರಂದು ಚಿಕಿತ್ಸೆ ಫಲಕಾರಿಯಾಗದೇ ಮರತಪಟ್ಟಿರುತ್ತಾರೆ.
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ದಿಂಬ ಚಾಮನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ದಿಂಬಚಾಮನಹಳ್ಳಿ ಗ್ರಾಮದ ವಾಸಿ ನಾಗಮ್ಮ (೩೨) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರವಿ. ಅಶೋಕ, ಸರೋಜಮ್ಮ, ಮತ್ತು ಈಶ್ವರಮ್ಮ ಎಂಬುವರು ಇವರ ಸೂರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು :
-ಸ್ಥಳ ದಂಡ ಮೊತ್ತ : ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



