ದಿನದ ಅಪರಾಧಗಳ ಪಕ್ಷಿನೋಟ ೬ ನೇ ನವಂಬರ್ ೨೦೦೯

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೬-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಜಯಮಂಗಲ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಜಯಮಂಗಲ ಗ್ರಾಮದ ವಾಸಿ ಸೋಮಶೇಖರ್‍ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಿವ, ಮಂಜುನಾತ ಮತ್ತಿತರೇ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕಲ್ಲುಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಜಮೀನಿನ ವಿವಾದದ ಹಿನ್ನೆಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಸುಗಟೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಸುಗಟೂರು ಗ್ರಾಮದ ವಾಸಿ ಎಸ್.ಬಿ. ನಂಜುಂಡೇಶ್ವರ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತಿತರೇ ೧೨ ಜನರು ಅಕ್ರಮ ಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸ್ವತ್ತು ಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರದ ಆರ್‍.ಟಿ.ಒ ಕಛೇರಿ ಮುಂದೆ ಹೋಗುತ್ತಿದ್ದ ಕೆಎ-೦೭-ಎಫ್-೧೧೧೬ ಸಂಖ್ಯೆ ಕೆ.ಎಸ್.ಅರ್‍.ಟಿ.ಸಿ ಬಸ್ಸನ್ನು ದ್ವಿಚಕ್ರವಾಹನದಲ್ಲಿ ಬಂದ ಸುಮಾರು ೬೦ ರಿಂದ ೭೦ ಜನರು ಅಡ್ಡಗಟ್ಟಿ ನಿಲ್ಲಿಸಿ ಕಲ್ಲುಗಳಿಂದ ಬಸ್ಸಿನ ಗ್ಲಾಸನ್ನು ಹೊಡೆದು ಸ್ವತ್ತು ಹಾನಿ ಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply