ದಿನದ ಅಪರಾಧಗಳ ಪಕ್ಷಿನೋಟ ೦೮ ನೇ ನವಂಬರ್ ೨೦೦೯

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೮-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್‌ನ ಟ್ರಾಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೧೧-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ಬಸವರಾಜು ಎಂಬವರು ಜಮೀನಿನಲ್ಲಿ ನಿಲ್ಲಿಸಿದ್ದ ರೂ. ೪೫,೦೦೦/- ಬೆಲೆ ಬಾಳುವ ಟ್ರಾಕ್ಟರ್‌‌ನ ಟ್ರಾಲಿ ಸಂಖ್ಯೆ ಎಂವೈಜಡ್-೪೭೬೮ಅನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೪

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೪

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೦೮೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮೂರಾಂಡಹಳ್ಳಿ ಗ್ರಾಮದ ವಾಸಿ ಶ್ರೀರಾಮಪ್ಪ ಎಂಬುವರು ನಡೆದುಕೊಂಡು ಮೂರಾಂಡಹಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಎಪಿ-೧೫-ಡಬ್ಲ್ಯೂ-೪೨೬೬ರ ಚಾಲಕ ತನ್ನ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶ್ರೀರಾಮಪ್ಪ ರವರಿಗೆ ಡಿಕ್ಕಿ ಹೊಡೆಸಿ ನಂತರ  ರಸ್ತೆ ಬದಿಯ ಹಳ್ಳಕ್ಕೆ ಉರುಳಿಸಿರುತ್ತಾನೆ. ಪರಿಣಾಮ ಟೆಂಪೋನಲ್ಲಿದ್ದ ನಾರಾಯಣಮ್ಮ, ನಾರೆಮ್ಮ ಮತ್ತು ಇತರರಿಗೆ ಗಾಯಗಳಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ  ಮುಳಬಾಗಿಲು ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ-೪ರ ತಾಯಲೂರು ಬೈಪಾಸ್ ಬಳಿ ಕೆಎಸ್‌‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೧-ಎಫ್-೮೪೪೮ ರ ಚಾಲಕ ತನ್ನ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರು ಸಂಖ್ಯೆ ಕೆಎ-೦೩-ಎಂಡಿ-೭೭೯೭ಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳಾಗಿರುತ್ತದೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕರಡಿಗಾನಹಳ್ಳಿ ಗ್ರಾಮದ ವಾಸಿ ಸುಬ್ರಮಣಿ ಎಂಬುವರು ತಮ್ಮ ಗ್ರಾಮದಿಂದ ನಂಗಲಿಗೆ ಹೋಗುವ ಸಲುವಾಗಿ ಕೆಎ-೫೨-೭೯೨ ಸಂಖ್ಯೆಯ ಆಟೋವಿನಲ್ಲಿ ನಂಗಲಿ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಆಟೋ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಆಟೋ ಉರುಲಿ ಬಿದ್ದಿರುತ್ತದೆ. ಇದರ ಪರಿಣಾಮ ಸುಬ್ರಮಣಿ ರವರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೧೧೪೫ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಮದುಸೂಧನ್ ರೆಡ್ಡಿ ಎಂಬುವರು ತನ್ನ ತಾಯಿ, ಹೆಂಡತಿ ಹಾಗೂ ಇನ್ನಿತರರೊಡನೆ ತನ್ನ ಕಾರ್‍ ಸಂಖ್ಯೆ ಕೆಎ-೫೨-ಎಂ-೨೪೨೪ ರಲ್ಲಿ ಎನ್.ಹೆಚ್ ೪ ರಸ್ತೆಯ ತಂಬಿಹಳ್ಳಿ ಬ್ರಿಡ್ಜ್ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಕೆಎ-೦೭-೬೦೨೫ ಟಿಪ್ಪರ್‍ ಲಾರಿ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply