ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: ೨೨-೦೧-೨೦೧೨ ರಂದು ೧೪೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಸಾಮಾನ್ಯ ಅಪಘಾತ :
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೧-೨೦೧೨ ರಂದು ೧೫೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಯಲುವಹಳ್ಳಿ ಗ್ರಾಮದ ವಾಸಿ ನರಸಿಂಹಮೂರ್ತಿ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೨-ಆರ್-೪೮೬೧ ರಲ್ಲಿ ಮುಳಬಾಗಿಲು ರಸ್ತೆಯ ಮೀಸಗಾನಹಳ್ಳಿ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೧-ಆರ್-೯೦೪೧ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ನರಸಿಂಹಮೂರ್ತಿ ರವರಿಗೆ ಗಾಯಗಳಾಗಿರುತ್ತದೆ.
ಸರ್ಕಾರಿ ನೌಕರನ ಮೇಲೆ ಹಲ್ಲೆ :
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೧-೨೦೧೨ ರಂದು ೧೭೦೦ ಗಂಟೆ ಸಮಯದಲ್ಲಿ ಸರ್ಕಾರಿ ಬಸ್ ಸಂಖ್ಯೆ ಕೆಎ-೦೭-ಎಫ್-೧೩೫೪ರ ಚಾಲಕ ಗೋಪಾಲ ಮತ್ತು ನಿರ್ವಾಹ ಆನಂದ ಎಂಬುವರು ಕೋಲಾರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸುತ್ತಿದ್ದರು. ಆ ಸಮಯದಲ್ಲಿ ಯಾರೋ ಒಬ್ಬ ಆಸಾಮಿ ಸಿಗರೇಟ್ ಸೇದಿಕೊಂಡು ಬಸ್ ಹತ್ತುತ್ತಿದ್ದು, ಇದನ್ನು ಪ್ರಶ್ನಿಸಿದ ಚಾಲಕ ಗೋಪಾಲ್ ರವರಿಗೆ ಸುನಿಲ್, ದೇವರಾಜ, ಶಿವಕಮಲ್ ಮತ್ತು ಶಿವಾ @ ಸಾರಾಯಿ ಶಿವ ಎಲ್ಲರೂ ಕೋಲಾರ ನಗರ ವಾಸಿಗಳು ಅವಾಚ್ಚಶಬ್ದಗಳಿಂದ ಬೈದು ಕಲ್ಲಿನಿಂದ ಹಣೆಗೆ ಹೊಡೆದು ಗಾಯಪಡಿಸಿದ್ದು, ಬಿಡಿಸಲು ಹೋದ ಆನಂದ್ ರವರ ಕೈಗೆ ಹೊಡೆದು ಗಾಯಪಡಿಸಿ, ಸರ್ಕಾರಿ ಕೆಲಸಕ್ಕೆ ಅಡಚಣೆಯನ್ನುಂಟು ಮಾಡಿರುತ್ತಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.