ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: ೨೩-೦೧-೨೦೧೨ ರಂದು ೧೪೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಸಾಮಾನ್ಯ ಅಪಘಾತ :
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೧-೨೦೧೨ ರಂದು ೧೨೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಯಾನಾದನಹಳ್ಳಿ ಗ್ರಾಮದ ವಾಸಿ ವೆಂಕಟಮ್ಮ ಎಂಬುವರು ತಂಬಿಹಳ್ಳಿ ಗ್ರಾಮದ ಚೌಡಮ್ಮ ರವರ ಮನೆಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಬಂದ ಕಾರು ಸಂಖ್ಯೆ ಕೆಎ-೦೧-ಎನ್-೮೧೧೪ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ವೆಂಕಟಮ್ಮ ರವರಿಗೆ ಗಾಯಗಳಾಗಿರುತ್ತದೆ.
ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೧-೨೦೧೨ ರಂದು ೨೦೩೦ ಗಂಟೆ ಸಮಯದಲ್ಲಿ ಪುಂಗನೂರು ತಾಲೂಕು ಮರಿಮಾಕನಪಲ್ಲಿ ಗ್ರಾಮದ ವಾಸಿ ಶಿವಾ @ ಶಿವರಾಜ್ ಎಂಬುವರು ತನ್ನ ಕಾರು ಸಂಖ್ಯೆ ಕೆಎ-೦೫-ಎಂಇ-೯೦೫೬ ಅನ್ನು ಚಾಲನೆ ಮಾಡಿಕೊಂಡು ರಾಷ್ಟ್ರೀಯ ಹೆದ್ದಾರಿ-೪ರ ಮಾಲೂರು ಜಿಗ್‌ಜಾಗ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ನರಸಾಪುರ ಕಡೆಯಿಂದ ಬಂದ ಟೆಂಪೋ ಸಂಖ್ಯೆ ಕೆಎ-೫೩-೧೦೦ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಕಾರಿನಲ್ಲಿದ್ದ ಮೂರು ಜನರಿಗೆ ಗಾಯಗಳಾಗಿರುತ್ತದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.